ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ’

Published 4 ಮೇ 2024, 16:26 IST
Last Updated 4 ಮೇ 2024, 16:26 IST
ಅಕ್ಷರ ಗಾತ್ರ

ಬೀದರ್‌: ‘ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ’ ಎಂದು ನಟ–ನಿರ್ಮಾಪಕರೂ ಆದ ಕಾಂಗ್ರೆಸ್‌ ಮುಖಂಡ ಎಸ್‌. ನಾರಾಯಣ ಅಭಿಪ್ರಾಯ ಪಟ್ಟರು.

ಎಲ್ಲರಿಗೂ ಗೊತ್ತಿರುವಂತೆ ರಾಜ್ಯದಲ್ಲಿ ಭೀಕರ ಬರ ಇದೆ. ಆದರೆ, ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅದರ ಬಿಸಿ ತಟ್ಟಿಲ್ಲ. ಒಂದು ತಿಂಗಳಿಂದ ರಾಜ್ಯದ ಹಲವೆಡೆ ಪ್ರಚಾರ ಕೈಗೊಂಡಿದ್ದೇನೆ. ಇದನ್ನು ಸ್ವತಃ ನಾನೇ ಅನುಭವಿಸಿದ್ದೇನೆ. ಜನ ಕೂಡ ನನಗೆ ಹೇಳಿದ್ದಾರೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ಯಾರಂಟಿಗಳು ಚುನಾವಣೆಯ ಗಿಮಿಕ್‌ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ರಾಜ್ಯ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯವೇನೂ ದಿವಾಳಿ ಆಗಿಲ್ಲ. ಅಭಿವೃದ್ಧಿ ಕೆಲಸಗಳು ಮುಂದುವರೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಅನೇಕ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಹಣಕಾಸು ಸಚಿವರೂ ಆಗಿರುವ ಅವರು ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡುವುದಿಲ್ಲ ಎಂದು ಹೇಳಿದರು.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪರವಾದ ಅಲೆ ಜೋರಾಗಿದೆ. ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಬೀದರ್‌, ಬಸವಕಲ್ಯಾಣದಲ್ಲಿ ಕೂಡ ಪ್ರಚಾರ ಕೈಗೊಂಡಿದ್ದು, ನಮ್ಮ ಪಕ್ಷದ ಅಭ್ಯರ್ಥಿ ಸಾಗರ್‌ ಖಂಡ್ರೆ ಕೂಡ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಮಾಧ್ಯಮ ವಕ್ತಾರ ಜಾರ್ಜ್‌ ಫರ್ನಾಂಡಿಸ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT