ಶನಿವಾರ, ಮೇ 30, 2020
27 °C

ನಿಷೇಧವಿದ್ದರೂ ಸಾಮೂಹಿಕ ನಮಾಜ್: ಕಮಲನಗರದಲ್ಲಿ 24 ಜನರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

representative image

ಕಮಲನಗರ (ಬೀದರ್): ಕೋವಿಡ್–19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಆದರೆ, ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ಕಮಲನಗರದಲ್ಲಿ ಸಾಮೂಹಿಕ ನಮಾಮ್‌ ಮಾಡಿದ 24 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಮಲನಗರ ಪಟ್ಟಣದ ಖುರೇಷಿ ಬಡಾವಣೆಯ ಸದರ್ ಪಾಶಾಮಿಯಾ ಅವರಿಗೆ ಸೇರಿದ  ಕಟ್ಟಡದಲ್ಲಿ 25ಕ್ಕೂ ಅಧಿಕ ಜನರು ಸೇರಿ ಒಂದೇ ಸ್ಥಳದಲ್ಲಿ ನಮಾಜ್ ಮಾಡುತ್ತಿರುವ ಮಾಹಿತಿ ಬಂದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು