ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾರ್ಟ್‌ ಸರ್ಕ್ಯೂಟ್‌ಗೆ ಕಂಬದಲ್ಲಿ ಬೆಂಕಿ

Published 5 ಸೆಪ್ಟೆಂಬರ್ 2024, 16:24 IST
Last Updated 5 ಸೆಪ್ಟೆಂಬರ್ 2024, 16:24 IST
ಅಕ್ಷರ ಗಾತ್ರ

ಬೀದರ್‌: ಶಾರ್ಟ್‌ ಸರ್ಕ್ಯೂಟ್‌ನಿಂದ ನಗರದ ಮೋಹನ್‌ ಮಾರ್ಕೆಟ್‌ ಸಮೀಪದ ಹರಳಯ್ಯಾ ವೃತ್ತ ಸಮೀಪದ ವಿದ್ಯುತ್‌ ಕಂಬದಲ್ಲಿ ಗುರುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನ ಮಾಲೀಕರು ಕಂಬದ ಕೆಳಗಡೆ ನಿಲ್ಲಿಸಿದ್ದ ವಾಹನಗಳನ್ನು ಬೇರೆಡೆ ತೆಗೆದುಕೊಂಡು ಹೋದರು. ಅಕ್ಕಪಕ್ಕದ ಮಳಿಗೆ ಮಾಲೀಕರು ಕೆಲಕಾಲ ಆತಂಕಕ್ಕೆ ಒಳಗಾದರು. ಆನಂತರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಕಂಬಕ್ಕೆ ಅಳವಡಿಸಿದ್ದ ಬ್ಲ್ಯಾಕ್‌ ಬಾಕ್ಸ್‌ ಸಮೇತ ವಿದ್ಯುತ್‌ ತಂತಿಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT