ಶುಕ್ರವಾರ, ಮಾರ್ಚ್ 24, 2023
28 °C

ಮೀನು ಸಾಕಾಣಿಕೆ ತರಬೇತಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿ ಕಾರ್ಯಕ್ರಮದಲ್ಲಿ ಶನಿವಾರ (ಜು.10) ಬೆಳಿಗ್ಗೆ 11ಕ್ಕೆ ವೈಜ್ಞಾನಿಕ ಮೀನು ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆ ಯೋಜನೆಗಳ ಕುರಿತು ರೈತರಿಗೆ ಆನ್‍ಲೈನ್‍ನಲ್ಲಿ ತರಬೇತಿ ಹಮ್ಮಿಕೊಂಡಿದೆ.

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲೇಶ ಬಿ. ಮೀನು ಸಾಕಾಣಿಕೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಒಳನಾಡು ಮೀನುಗಾರಿಕೆ ಲಾಭದಾಯಕ ಉದ್ಯಮವಾಗಿ ಜನಪ್ರಿಯತೆ ಪಡೆಯುತ್ತಿದೆ. ಕಡಿಮೆ ವೆಚ್ಚದಲ್ಲಿ ಒಂದೇ ಜಾತಿ ಅಥವಾ ಮಿಶ್ರ ಮೀನು ಸಾಕಾಣಿಕೆ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.

ಸ್ವದೇಶಿ ಮೀನುಗಳ ಜತೆಗೆ ವಿದೇಶಿ ಮೀನುಗಳನ್ನೂ ವಿವಿಧ ಅನುಪಾತದಲ್ಲಿ ಸಾಕಬಹುದು. ಒಂದೇ ಹೊಂಡದಲ್ಲಿ ಮೇಲು ಪದರು, ಮಧ್ಯದ ಪದರು ಹಾಗೂ ಕೆಳ ಪದರುಗಳಲ್ಲಿ ಏಕಕಾಕಕ್ಕೆ ವಿವಿಧ ಜಾತಿಯ ಮೀನುಗಳನ್ನು ಸಾಕಬಹುದು ಎಂದು ತಿಳಿಸಿದ್ದಾರೆ.

ಮೀನುಗಾರಿಕೆಗೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ ರೈತರು ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಗೂಗಲ್ ಮೀಟ್ ಲಿಂಕ್ meet.google.com/zpz-msoq-vsi ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು