ಶುಕ್ರವಾರ, ಸೆಪ್ಟೆಂಬರ್ 24, 2021
26 °C
ಬಿಡಿಎ ಮಾಜಿ ಅಧ್ಯಕ್ಷ ಜಾಗೀರದಾರ್ ಒತ್ತಾಯ

ಇಂಟರ್‌ನೆಟ್ ನೆಟ್‍ವರ್ಕ್ ಸಮಸ್ಯೆ ಪರಿಹರಿಸಿ: ಸಂಜಯ್ ಜಾಗೀರದಾರ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್ ನಗರಸಭೆ ಕಚೇರಿಯಲ್ಲಿ ಇಂಟರ್‌ನೆಟ್ ನೆಟ್‍ವರ್ಕ್ ಸಮಸ್ಯೆ ಪರಿಹರಿಸಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಆಗ್ರಹಿಸಿದ್ದಾರೆ.

 

ನಗರಸಭೆ ಕಚೇರಿಯಲ್ಲಿ ದಿನದಲ್ಲಿ ಹತ್ತಾರು ಬಾರಿ ಇಂಟರ್‌ನೆಟ್ ನೆಟ್‍ವರ್ಕ್ ಕೈಕೊಡುತ್ತಿದೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಗಂಟೆಗಟ್ಟಲೇ ಕಾಯಬೇಕಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಗರಿಕರು ನಿವೇಶನ ಖಾತಾ, ನಿವೇಶನ, ಮನೆ, ನಲ್ಲಿ ಕರ ಪಾವತಿಗೆ ಒಂದು ತಿಂಗಳಿಂದ ಇಂಟರ್‌ನೆಟ್ ನೆಟ್‍ವರ್ಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 

ಆಧುನಿಕ ಯುಗದಲ್ಲಿ ಆನ್‍ಲೈನ್‍ನಲ್ಲೇ ಹೆಚ್ಚು ಕೆಲಸಗಳು ನಡೆಯುತ್ತಿವೆ. ನಗರಸಭೆಯಲ್ಲಿ ವಿದ್ಯುತ್ ಕೈಕೊಟ್ಟರೂ ಆನ್‍ಲೈನ್ ಕೆಲಸಗಳು ಸ್ಥಗಿತಗೊಳ್ಳುತ್ತಿವೆ. ಇನ್‍ವರ್ಟರ್ ಸುಸ್ಥಿತಿಯಲ್ಲಿ ಇಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

 

ನಗರಸಭೆ ಆಯುಕ್ತರು ಕಚೇರಿ ಕಾರ್ಯಗಳು ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಮಳೆಯಿಂದ ತಗ್ಗು ದಿನ್ನೆಗಳು ಸೃಷ್ಟಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು. ಚರಂಡಿಗಳನ್ನು ಶುಚಿಗೊಳಿಸಬೇಕು. ಬಡಾವಣೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.