ಶುಕ್ರವಾರ, ಮೇ 14, 2021
21 °C
ಡಾ.ಬಾಬಾಸಾಹೇಬ ಅಂಬೇಡ್ಕರ್‌ ಪ್ರತಿಮೆಗೆ ಗೌರವ ಸಮರ್ಪಣೆ

ಸಂವಿಧಾನ ಶಿಲ್ಪಿಗೆ ಅಭಿಮಾನಿಗಳಿಂದ ಪುಷ್ಪ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಕೋವಿಡ್‌ ಆತಂಕದ ನಡುವೆಯೂ ಬಾಬಾಸಾಹೇಬರ ಅಭಿಮಾನಿಗಳು ಸೂರ್ಯೋದಯದ ವೇಳೆಗೆ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಬಳಿ ಮೇಣದ ಬತ್ತಿಯನ್ನು ಬೆಳಗಿ ಅವರ ಜನ್ಮದಿನ ಆಚರಿಸಿದರು. ಹಲವು ಅಭಿಮಾನಿಗಳು ಪುತ್ಥಳಿಗೆ ಮಾಲಾರ್ಪಣೆ ಮಾಡಿದರೆ, ಕೆಲವರು ಪ್ರತಿಮೆ ಕೆಳಗೆ ಪುಷ್ಪವೃಷ್ಟಿ ಮಾಡಿ ಗೌರವ ಸಮರ್ಪಿಸಿದರು.

ಪರಿಶಿಷ್ಟರು ತಮ್ಮ ಮನೆಗಳಲ್ಲಿ ಬಾಬಾಸಾಹೇಬರ ಭಾವಚಿತ್ರಗಳಿಗೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿ
ಅಂಬೇಡ್ಕರ್‌ ವೃತ್ತಕ್ಕೆ ಕುಟುಂಬದ ಸದಸ್ಯರೊಂದಿಗೆ ಬಂದು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮಪಟ್ಟರು.
ರಾಜ್ಯ ಜಾನಪದ ಅಕಾಡೆಮಿ ಮಾಜಿ ಸದಸ್ಯ ವಿಜಯಕುಮಾರ ಸೋನಾರೆ, ಬುದ್ಧ, ಬಸವ, ಅಂಬೇಡ್ಕರ್‌ ವೇದಿಕೆಯ ಅಧ್ಯಕ್ಷ ಮಹೇಶ ಗೊರನಾಳಕರ್, ಮುಖಂಡರಾದ ಮಾರುತಿ ಬೌದ್ಧೆ, ಅನಿಲ ಬೆಲ್ದಾರ್, ಕಲ್ಯಾಣರಾವ್‌ ಭೋಸಲೆ, ನಾಗೇಂದ್ರ ದಂಡೆ, ದೇವೇಂದ್ರ ಸೋನಿ, ಉಮೇಶಕುಮಾರ ಸೋರಳ್ಳಿಕರ್, ಬಹುಜನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಪ್ರದೀಪ ನಾಟಕೇರ್ ಬಸವರಾಜ ಮಾಳಗೆ,ಶ್ರೀಪತಿ ದೀನೆ, ಸಾಹಿತಿ ಸುಬ್ಬಣ್ಣ ಕರಕನಳ್ಳಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಯಿಂದ ಡಾ.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ:
ಡಾ.ಅಂಬೇಡ್ಕರ್‌ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ಅವರು ಡಾ.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಹೀಂ ಖಾನ್, ಜೆಡಿಎಸ್‌ಲ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಇದ್ದರು.

* * *
ಸಿದ್ಧಾರ್ಥ ಕಾಲೇಜ್:
ನಗರದ ಸಿದ್ಧಾರ್ಥ ಪದವಿ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ 130ನೇ ಜಯಂತಿ ಆಚರಿಸಲಾಯಿತು.
ಪದವಿ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ಪ್ರಭು ಮಾತನಾಡಿದರು.
ಕಾಲೇಜಿನ ಸಿಬ್ಬಂದಿ ಇದ್ದರು. ಗೋಪಾಲ ಬಡಿಗೇರ ವಂದಿಸಿದರು.

***
ಸಂವಿಧಾನವೆ ನಮ್ಮ ಅಂತಃಶಕ್ತಿ – ಸುರೇಶ ಚನ್ನಶೆಟ್ಟಿ
ಬೀದರ್‌: ‘ಜಗತ್ತಿನ ಅತಿದೊಡ್ಡ ಪ್ರಜಾಫ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಸಂವಿಧಾನವೇ ಅಂತಃಶಕ್ತಿಯಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ನುಡಿದರು.

ನಗರದ ಕರಾಶಿ ಸಂಸ್ಥೆಯ ಕರ್ನಾಟಕ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಡಾ.ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟ ಕೇಂದ್ರಿತ ತಾತ್ವಿಕ ಸಿದ್ಧಾಂತ, ಜೀವನ ಸಾಧನೆ ನಮಗೆಲ್ಲ ಅನುಕರಣೀಯ’ ಎಂದು ಅಭಿಪ್ರಾಯ ಪಟ್ಟರು.
ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಲ್ಲೂರ, ಉಪನ್ಯಾಸಕರಾದ ಗಣೇಶ ಥೋರೆ ಮಂಗಲಾ ಗಡಮಿ, ಸಚಿನ್ ವಿಶ್ವಕರ್ಮ ವೀರಶೆಟ್ಟಿ ಚನಶೆಟ್ಟಿ ಎಂ.ಎಲ್. ರಾಸೂರ್, ವೀರಶೆಟ್ಟಿ ಪಾಟೀಲ, ಗಣೇಶ ಘಂಟಿ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.