ಬುಧವಾರ, ಮೇ 18, 2022
25 °C

ಜನಪದ ಸಂಸ್ಕೃತಿ ಉಳಿವಿಗೆ ಶ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕರ್ನಾಟಕ ಜಾನಪದ ಪರಿಷತ್ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ಬೀದರ್ ಜಿಲ್ಲೆಯಲ್ಲಿ ಜನಪದ ಸಂಸ್ಕೃತಿ ಉಳಿವಿಗೆ ನಿರಂತರ ಪ್ರಯತ್ನಿಸುತ್ತಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ಬಿ. ನಾಯಕ್ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಏರ್ಪಡಿಸಿದ್ದ ಜಾನಪದ ಜಗಲಿ ಹಾಗೂ ಕರ್ನಾಟಕ ಜಾನಪದ ಪರಿಷತ್ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ಜನಪದ ಸಂಸ್ಕೃತಿಯ ರಾಯಭಾರಿಗಳು. ಪ್ರತಿಯೊಬ್ಬರೂ ಜನಪದ ಉಳಿಸಿ ಬೆಳೆಸಲು ಸಂಕಲ್ಪ ತೊಡಬೇಕು ಎಂದು ಹೇಳಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಸಂಯೋಜನಾಧಿಕಾರಿ ಜಗನ್ನಾಥ ಹೆಬ್ಬಾಳೆ ಮಾತನಾಡಿ, ಜಾನಪದ ವಿಶ್ವವಿದ್ಯಾಲಯದ ಕೇಂದ್ರಕ್ಕೆ ಕಮಠಾಣ ಸಮೀಪ ಐದು ಎಕರೆ ಜಮೀನು ಒದಗಿಸಲಾಗಿದೆ. ಅನುದಾನ ಕಲ್ಪಿಸಿದರೆ ಜನಪದ ಸಂಸ್ಕøತಿ ಉಳಿಸಲು ನೆರವಾಗಲಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಕೆಯ ನಿವೃತ್ತ ಸಹಾಯಕ ನಿರ್ದೇಶಕ ಶಾಂತಕುಮಾರ ಪಾಟೀಲ, ಕರ್ನಾಟಕ ಸಾಹಿತ್ಯ ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ಮಲ್ಲಿಕಾರ್ಜುನ ಸ್ವಾಮಿ, ಎಸ್.ಬಿ. ಕುಚಬಾಳ, ರಾಜಕುಮಾರ ಹೆಬ್ಬಾಳೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ, ಮಹಾರುದ್ರ ಡಾಕುಳಗಿ ಇದ್ದರು.

ಸಂಗೀತಾ ಕಾಂಬಳೆ ಹಾಗೂ ದೇವದಾಸ ಚಿಮಕೋಡೆ ಮತ್ತು ಸಂಗಡಿಗರು ಜನಪದ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು