ಶನಿವಾರ, ಜನವರಿ 23, 2021
28 °C

ಜನಪದ ವೈದ್ಯ ಪದ್ಧತಿ ಪರಿಣಾಮಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ಬೀದರ್: ಜನಪದ ವೈದ್ಯ ಪದ್ಧತಿ ಪರಿಣಾಮಕಾರಿಯಾಗಿದೆ ಎಂದು ಸಾಹಿತಿ ನಿರಹಂಕಾರ ಬಂಡಿ ನುಡಿದರು.

ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ, ತಾಲ್ಲೂಕು ಘಟಕ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಾನಪದ ಜಗಲಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಎಲ್ಲ ವೈದ್ಯ ಪದ್ಧತಿಗಳಿಗೂ ಜನಪದ ವೈದ್ಯ ಪದ್ಧತಿಯೇ ಮೂಲ ಎಂದು ಹೇಳಿದರು.

ಕೇಂದ್ರ ಜಾಗೃತಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಉದ್ಘಾಟಿಸಿದರು. ಉಪನ್ಯಾಸಕ ವಿಜಯಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಆರ್‍ಎಸ್‍ಎಚ್‍ಎಸ್ ಪ್ರೌಢಶಾಲೆ ಮುಖ್ಯ ಶಿಕ್ಷಕ ರೇವಣಪ್ಪ ಮೂಲಗೆ, ಎಸ್.ಬಿ. ಕುಚಬಾಳ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನೀತಾ ಕೂಡ್ಲಿಕರ್ ಸ್ವಾಗತಿಸಿದರು. ಮಹಾನಂದ ಮಡಕಿ ನಿರೂಪಿಸಿದರು. ಮೀರಾ ಖೇಣಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು