ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ

ರಾಜಕೀಯ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಸಭೆ
Last Updated 17 ಏಪ್ರಿಲ್ 2019, 14:50 IST
ಅಕ್ಷರ ಗಾತ್ರ

ಬೀದರ್‌: ‘ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಬೇಕು’ ಎಂದು ಚುನಾವಣಾ ಪೊಲೀಸ್ ವೀಕ್ಷಕಿ ಡಾ.ರಾಜಶ್ರೀ ಸಿಂಗ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಸಭಾ ಚುನಾವಣೆ ಪ್ರಯುಕ್ತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಏಜೆಂಟರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಮಿತಿಯನ್ನರಿತು ಕಾರ್ಯಚಟುವಟಿಕೆಗಳನ್ನು ನಡೆಸಬೇಕು. ಅಕ್ರಮವಾಗಿ ಹಣ, ಮದ್ಯ ಹಂಚುವುದು ಮತ್ತು ವಸ್ತುಗಳನ್ನು ಸಾಗಣೆ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಲ್ಲಿ ಅಥವಾ ಸಮಸ್ಯೆಗಳು ಎದುರಾದಲ್ಲಿ
ನೇರವಾಗಿ ನನಗೆ ಅಥವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ‘ಬೀದರ್ ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾದ ಜಿಲ್ಲೆಯಾಗಿದೆ. ಈ ಪರಂಪರೆ ಇಲ್ಲಿ ಮುಂದುವರಿಯಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಡಾ.ಎಚ್.ಆರ್.ಮಹಾದೇವ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT