ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾಂಧಿ ತತ್ವ ಬದುಕಿನ ಉಸಿರಾಗಲಿ’

Last Updated 9 ನವೆಂಬರ್ 2019, 10:07 IST
ಅಕ್ಷರ ಗಾತ್ರ

ಚಿಟಗುಪ್ಪ: ‘ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗಿಸಲು ದೇಶದಾದ್ಯಂತ ಸಂಕಲ್ಪ ಯಾತ್ರೆ ನಡೆಸಲಾಗುತ್ತಿದೆ. ಗಾಂಧೀಜಿ ಅವರ ತತ್ವ ಸಿದ್ಧಾಂತಗಳು ಎಲ್ಲರ ಬದುಕಿನ ಉಸಿರಾಗಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ತಾಲ್ಲೂಕಿನ ಚಾಂಗಲೇರಾ ಗ್ರಾಮದಲ್ಲಿ ಶುಕ್ರವಾರ ಗೋವಿಗೆ ಮೇವು ನೀಡುವ ಮೂಲಕ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾತ್ರೆಯ ಮೂಲಕ ಕ್ಷೇತ್ರದೆಲ್ಲೆಡೆ ನಾಗರಿಕರಲ್ಲಿ ಶೌಚಾಲಯದ ಮಹತ್ವ, ಪ್ಲಾಸ್ಟಿಕ್‌ನಿಂದಾಗುವ ಹಾನಿ, ಜಲಶಕ್ತಿ ಯೋಜನೆ ಮೂಲಕ ಬಾಂದಾರ ನಿರ್ಮಾಣ, ಮದ್ಯಪಾನದ ದುಷ್ಪರಿಣಾಮಗಳು, ಸ್ವದೇಶಿ ವಸ್ತುಗಳ ಬಳಕೆ, ಜನಸಂಖ್ಯೆ ನಿಯಂತ್ರಣ ಕುರಿತು ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ, ಆಯುಷ್ಮಾನ್‌ ಭಾರತ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ' ಎಂದು ಅವರು ಹೇಳಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಗಾಂಧೀಜಿ ಅವರ ಕನಸು ನನಸಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀಜಿ ಅವರ ಕನಸು ನನಸು ಮಾಡುವ ಯೋಜನೆ ರೂಪಿಸಿದ್ದು, ಅದರ ಯಶಸ್ವಿಗಾಗಿ ಗಾಂಧಿ ಸಂಕಲ್ಪ ಯಾತ್ರೆ ನಡೆಯುತ್ತಿದೆ’ ಎಂದು ಹೇಳಿದರು.

ಗ್ರಾಮದ ಮುಖ್ಯಬೀದಿಗಳಲ್ಲಿ ಪಾದಯಾತ್ರೆ ನಡೆಯಿತು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT