ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಹಿಂದೂ ಧರ್ಮ ಮಾರ್ಗ ರೂಢಿಸಿಕೊಳ್ಳಿ: ಖಂಡ್ರೆ

Published 28 ಆಗಸ್ಟ್ 2024, 15:47 IST
Last Updated 28 ಆಗಸ್ಟ್ 2024, 15:47 IST
ಅಕ್ಷರ ಗಾತ್ರ

ಬೀದರ್‌: ‘ಯುವ ಪೀಳಿಗೆ ಸನಾತನ ಹಿಂದೂ ಧರ್ಮದ ಮಾರ್ಗ ರೂಢಿಸಿಕೊಂಡು ಸಮಾಜಕ್ಕೆ ಮಾದರಿ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.

ಕಾಯಕಯೋಗಿ ಫೌಂಡೇಶನ್‌ನಿಂದ ನಗರದ ಪಾಪನಾಶ ದೇವಸ್ಥಾನದಲ್ಲಿ ಶ್ರಾವಣದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತಿಹಾಸ ಪ್ರಸಿದ್ಧ ಪಾಪನಾಶ ದೇವಾಲಯ ಅಭಿವೃದ್ಧಿಪಡಿಸಿ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಒಳ್ಳೆಯ ರೀತಿಯಲ್ಲಿ ಅನುಕೂಲವಾಗುವಂತೆ ಮಾಡಲಾಗುವುದು. ದೇವಸ್ಥಾನ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ ಎಂದರು.

ಪೌರಾಡಳಿತ ಸಚಿವ ರಹೀಂ ಖಾನ್, ಬೇಮಳಖೇಡ ಹಿರೇಮಠದ ರಾಜೇಶ್ವರ ಶಿವಾಚಾರ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ, ಮಡಿವಾಳಪ್ಪ ಮಂಗಲಗಿ, ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ್‌, ಫೌಂಡೇಶನ್ ಪ್ರಮುಖರಾದ ಸುದರ್ಶನ್ ಬಿರಾದಾರ, ರಾಜಕುಮಾರ ನಾಯಿಕೋಡೆ, ಶಿವಕುಮಾರ ಪಾಟೀಲ ತೇಗಂಪುರ್, ಜ್ಯೋತಿಷ ಹಲಬರ್ಗೆ, ಮಹಾದೇವ ಖರಾಬೆ ಹಾಗೂ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT