ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ ತತ್ವಗಳ ಪಾಲನೆ ಅಗತ್ಯ: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿಕೆ

Last Updated 2 ಅಕ್ಟೋಬರ್ 2020, 15:38 IST
ಅಕ್ಷರ ಗಾತ್ರ

ಬೀದರ್‌: ‘ಹೃದಯ ವೈಶಾಲ್ಯತೆ ಇರಬೇಕು. ಸರಳ ಜೀವನ ನಡೆಸಬೇಕು ಎನ್ನುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮಹತ್ವದ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದರು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಹಾತ್ಮ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು.

‘ಗಾಂಧೀಜಿ ಅವರು ಸ್ವಾವಲಂಬಿ ಬದುಕಿಗೆ ಮಹತ್ವ ನೀಡಿದ್ದರು. ದೀನ-ದಲಿತರನ್ನು ಉದ್ದರಿಸಿ ಸಮಾಜ ಸಮತಾವಾದವನ್ನು ಪ್ರತಿಪಾದಿಸಿದ್ದರು’ ಎಂದು ತಿಳಿಸಿದರು.

ಸಾಹಿತಿ ಎಂ.ಜಿ.ಗಂಗನಪಳ್ಳಿ ಮಾತನಾಡಿ, ‘ಗಾಂಧೀಜಿ ಬಹುದೊಡ್ಡ ವ್ಯಕ್ತಿತ್ವ ಹೊಂದಿದವರು. ಅವರು ಮಾಡದ ಸಾಧನೆಗಳೇ ಇಲ್ಲ’ ಎಂದರು.

ಕೋವಿಡ್ ಕಾರಣ ಗಾಂಧಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕಲಾವಿದ ಶಿವಕುಮಾರ ಪಾಂಚಾಳ ಭಜನಾ ಗೀತೆಗಳನ್ನು ಹಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ಆಹಾರ ಇಲಾಖೆಯ ಉಪ ನಿರ್ದೇಶಕ ಬಾಬು ರೆಡ್ಡಿ ಇದ್ದರು.

ಬಿಜೆಪಿ ನಗರ ಘಟಕ

ಬೀದರ್‌: ಬಿಜೆಪಿ ನಗರ ಘಟಕ ವತಿಯಿಂದ ನಗರದ ಗಾಂಧಿ ಗಂಜ್‍ನಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು. ಸಂಸದ ಭಗವಂತ ಖೂಬಾ ಮಾತನಾಡಿ, ಪ್ರತಿಯೊಬ್ಬರು ಗಾಂಧೀಜಿ ಅವರ ತತ್ವ ಪಾಲಿಸಬೇಕಿದೆ ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಅನಿಲ್ ಪನ್ನಾಳೆ, ಎಪಿಎಂ ಸದಸ್ಯ ಅರವಿಂದ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಉಪಾಧ್ಯಕ್ಷ ರಾಜಕುಮಾರ ಚಿದ್ರಿ, ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ಶೈಲೇಂದ್ರ ಬೆಲ್ದಾಳೆ, ಶಶಿಲ್ ನಮೋಶಿ, ಬಾಬುರಾವ್ ಕಾರಭಾರೆ, ಶಿವಪುತ್ರ ವೈದ್ಧ, ಮಹೇಶ ಪಾಲಂ, ಸುರೇಶ ಮಾಶೆಟ್ಟಿ, ಹೇಮಲತಾ ಜೋಶಿ, ಗುಣವಂತ ಭಾವಿಕಟ್ಟಿ, ಶಶಿ ಹೊಸಳ್ಳಿ, ಸುನೀಲ ಗೌಳಿ, ಅನಿಲ ರಾಜಗೀರಾ ಇದ್ದರು.

ಸ್ವಚ್ಛತಾ ಕಾರ್ಯಕ್ರಮ

ಬೀದರ್‌: ಇಲ್ಲಿಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಎನ್‌ಇಕೆಎಸ್‌ಆರ್‌ಟಿಸಿ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.

ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ರಾಜೇಂದ್ರ ಜಾಧವ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿನಾಥ, ಸಹಾಯಕ ಸಂಚಾರ ವ್ಯವಸ್ಥಾಪಕ ಶ್ರೀಮಂತ ಘಂಟೆ, ಭದ್ರತಾ ಮತ್ತು ಜಾಗೃತಿ ಅಧಿಕಾರಿ ಮಲ್ಲಿಕಾರ್ಜುನ ಬೋಳರೆಡ್ಡಿ, ವಿಭಾಗೀಯ ನಿಯಂತ್ರಣಾಧಿಕಾರಿಗಳ ಆಪ್ತ ಕಾರ್ಯದರ್ಶಿ ಪ್ರಭುಲಿಂಗ ಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT