ಶುಕ್ರವಾರ, ಜುಲೈ 30, 2021
23 °C

ಆಹಾರ ಧಾನ್ಯ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಲಾಸಪುರ (ಜನವಾಡ): ನೆಹರು ಯುವ ಕೇಂದ್ರ ಹಾಗೂ ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಯುತ್ ಕ್ಲಬ್ ವತಿಯಿಂದ ಬೀದರ್ ತಾಲ್ಲೂಕಿನ ವಿಲಾಸಪುರ ಗ್ರಾಮದಲ್ಲಿ ಅಂಗವಿಕಲರು, ಹಿರಿಯ ನಾಗರಿಕರು ಹಾಗೂ ಬುದ್ಧಿಮಾಂಧ್ಯರಿಗೆ ಕೋವಿಡ್‌ ಲಸಿಕೆ ಹಾಕಿ ಆಹಾರಧಾನ್ಯ ವಿತರಿಸಲಾಯಿತು.

ತಹಶೀಲ್ದಾರ್ ಗಂಗಾದೇವಿ ಅವರು ಆಹಾರಧಾನ್ಯ ವಿತರಿಸಿ ಮಾತನಾಡಿ, ‘ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದೆಂದು 80 ಕೋಟಿ ಬಡವರಿಗೆ ತಲಾ ಉಚಿತ 10 ಕೆ.ಜಿ ಅಕ್ಕಿ ಹಾಗೂ ಒಂದು ಕಾರ್ಡಿಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸುತ್ತಿದೆ’ ಎಂದು ತಿಳಿಸಿದರು.

‘ಜಿಲ್ಲೆಯ ವಿವಿಧ ಸಂಘಟನೆಗಳು, ಸಂಘ– ಸಂಸ್ಥೆಗಳು ವಿಪ್ರೊದಂತಹ ದೊಡ್ಡ ಸಂಸ್ಥೆಗಳ ಸಹಕಾರದೊಂದಿಗೆ
ಬಡವರಿಗೆ ದಿನಸಿ ವಸ್ತುಗಳನ್ನು ಮನೆ ಮನೆಗೆ ಉಚಿತವಾಗಿ ಹಂಚುತ್ತಿವೆ’ ಎಂದು ಹೇಳಿದರು.

ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಯುತ್ ಕ್ಲಬ್ ಅಧ್ಯಕ್ಷೆ ಮಂಗಲಾ ಮರಕಲೆ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು