ಬೀದರ್: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ವಿತರಣೆ ಮಾಡುವ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಗುಣಮಟ್ಟದ ಆಹಾರ ಪದಾರ್ಥಗಳು ವಿತರಣೆ ಮಾಡಬೇಕು. ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ ಕೇಳಿ ಬಂದರೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೀದರ್ ತಾಲ್ಲೂಕಿನಲ್ಲಿ 11,476 ಗರ್ಭಿಣಿಯರು ನೋಂದಣಿ ಮಾಡಿಕೊಂಡಿದ್ದಾರೆ. ಅವರೆಲ್ಲರಿಗೂ ತಾಯಿ ಕಾರ್ಡ್ ವಿತರಣೆ ಮಾಡಬೇಕು. ಚಿಕಿತ್ಸೆಯ ವಿವರಗಳನ್ನು ಈ ಕಾರ್ಡ್ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಸಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.

‘ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಿಂದ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.