ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಪಾತ್ ಅತಿಕ್ರಮಣ ತೆರವು

Last Updated 4 ಮಾರ್ಚ್ 2021, 3:20 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದಲ್ಲಿ ಬುಧವಾರ ಡಿವೈಎಸ್ಪಿ ಡಾ.ದೇವರಾಜ ಬಿ. ನೇತೃತ್ವದಲ್ಲಿ ಪಟ್ಟಣದಲ್ಲಿ ಅತಿಕ್ರಮಣ ಮಾಡಿಕೊಂಡಿದ್ದ ಮುಖ್ಯರಸ್ತೆ ಪಕ್ಕದ ಫುಟ್‌ಪಾತ್‌ ಮೇಲಿನ ಸಾಮಗ್ರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲಾಯಿತು.

ಬಸ್ ನಿಲ್ದಾಣ ಮುಂಭಾಗ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಸುಭಾಷ, ಶಿವಾಜಿ ವೃತ್ತಗಳಲ್ಲಿ ವ್ಯಾಪಾರಸ್ಥರು ಫುಟ್‌ಪಾತ್‌ ಮೇಲೂ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದರಿಂದ ಜನ ಸಂಚಾರ, ವಾಹನ ಸಂಚಾರಕ್ಕೆ ಅನನುಕೂಲವಾಗಿ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿದ್ದವು. ಇದನ್ನು ಗಮನಿಸಿದ ಡಿವೈಎಸ್‌ಪಿ ದೇವರಾಜ ಅವರು ರಸ್ತೆ ಬದಿಯಲ್ಲಿಟ್ಟಿದ್ದ ಸರಕು, ಜಾಹೀರಾತು ಫಲಕ, ಕಟೌಟ್‌ ತೆರವಿಗೆ ವರ್ತಕರ ಮನಃಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದರು.

ಇನ್ಮುಂದೆ ರಸ್ತೆ ಅತಿಕ್ರಮಿಸಿ ಸಂಚಾರಕ್ಕೆ ಸಂಚಕಾರ ಮಾಡುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಿಪಿಐ ರಾಘವೇಂದ್ರ ಔರಾದಕರ್, ಪುರಸಭೆ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT