ರೈಲು ಮಾರ್ಗ ಕಾಮಗಾರಿ ಆರಂಭಕ್ಕೆ ಒತ್ತಾಯ

ಬೀದರ್: ಬೀದರ್- ನಾಂದೇಡ ರೈಲು ಮಾರ್ಗ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದ್ದಾರೆ.
ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಸುನೀತ್ ಶರ್ಮಾ ಅವರನ್ನು ಭೇಟಿ ಮಾಡಿ ಈ ಕುರಿತು ಬೇಡಿಕೆ ಮಂಡಿಸಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದ ರೈಲು ಮಾರ್ಗಗಳ ವಿದ್ಯುದ್ದೀಕರಣ, ಹೊಸ ರೈಲುಗಳ ಆರಂಭ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಶರ್ಮಾ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಖೂಬಾ ತಿಳಿಸಿದ್ದಾರೆ.
ಈಗಾಗಲೇ ರೈಲ್ವೆಗೆ ಸಂಬಂಧಿಸಿದಂತೆ ಕ್ಷೇತ್ರವು ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದು, ಜನರಿಗೆ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸಲು ಸಹಕರಿಸುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.