ಮಂಗಳವಾರ, ಮಾರ್ಚ್ 9, 2021
29 °C

ಕಬ್ಬು ಗದ್ದೆ ನೀರು ಖಾಲಿಗೆ ಒತ್ತಾಯಿಸಿ ನಾಳೆಯಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇನ್ನೂ ಸ್ವಾಧೀನಪಡಿಸಿಕೊಳ್ಳದ ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿನ ಕಬ್ಬು ಬೆಳೆದ ಹೆಚ್ಚುವರಿ ಜಮೀನಿನಲ್ಲಿ ನಿಂತಿರುವ ನೀರು ಖಾಲಿ ಮಾಡಿಸಲು ಒತ್ತಾಯಿಸಿ ಜ. 25 ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ತಿಳಿಸಿದ್ದಾರೆ.

ಸುಮಾರು ಎರಡು ಸಾವಿರ ಎಕರೆಯಷ್ಟು ಇರುವ ಹೆಚ್ಚುವರಿ ಜಮೀನಿನಲ್ಲಿ ರೈತರು ಬೆಳೆದಿರುವ ಕಬ್ಬು ಕಟಾವಿಗೆ ಬಂದಿದೆ. ಜಲಾಶಯದ ನಿಂತ ನೀರಿನಿಂದ ಈಗಾಗಲೇ ಅರ್ಧ ಬೆಳೆ ಹಾಳಾಗಿದೆ. ಇನ್ನುಳಿದ ಬೆಳೆಯೂ ಕೈಗೆ ಬಾರದಂತಾಗಿದೆ. ನೀರು ಖಾಲಿಯಾಗದೆ ಕಬ್ಬು ಕಟಾವು ಮಾಡಲಾಗದು. ಕಾರ್ಖಾನೆಗಳು ಕೂಡ 15 ದಿನಗಳಲ್ಲಿ ಪ್ರಸಕ್ತ ಸಾಲಿನ ಹಂಗಾಮು ಮುಕ್ತಾಯಗೊಳಿಸುವ ಸಾಧ್ಯತೆ ಇರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ತಕ್ಷಣ ಕೆನಾಲ್ ಇಲ್ಲವೇ ನದಿಗೆ ನೀರು ಬಿಟ್ಟರೆ ಕಬ್ಬು ಕಾರ್ಖಾನೆಗೆ ಸಾಗಿಸಲು ಅನುಕೂಲವಾಗಲಿದೆ. ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆಡಳಿತವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.