ಬೀದರ್ ಜಿಲ್ಲೆಯ ಕಾರಂಜಾ ಸಂತ್ರಸ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕಾರಂಜಾ ಸಂತ್ರಸ್ತರ ಪರವಾಗಿ ಮಾತನಾಡಿದರು. ಸಿಎಂ ಸ್ಪಂದಿಸಿ, ಬೇಡಿಕೆಗಳ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸಿ ಅದನ್ನು ಆಧರಿಸಿ ಪರಿಹಾರ ಒದಗಿಸುವ ಭರವಸೆ ನೀಡಿರುವುದು ಖುಷಿ ತಂದಿದೆ. ಸರ್ಕಾರದ ಕ್ರಮವನ್ನು ಸ್ವಾಗತಿಸುವೆ.
ಲಕ್ಷ್ಮಣ ದಸ್ತಿ, ಸಂಸ್ಥಾಪಕ ಅಧ್ಯಕ್ಷ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ