ಶುಕ್ರವಾರ, ಜೂನ್ 18, 2021
27 °C

ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಕೃಷಿ ಸಾಲ ಬಾಧೆಗೆ ಬೇಸತ್ತ ರೈತ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಸುಕಿನಲ್ಲಿ ಸಂಭವಿಸಿದೆ.

ಗ್ರಾಮದ ಮಾರುತಿ ಮಡೆಪ್ಪ ಪರೀಟ್ (53) ಮೃತ ರೈತ. ಅವರಿಗೆ ಐದು ಜನ ಹೆಣ್ಣುಮಕ್ಕಳಿದ್ದು, ನಾಲ್ವರಿಗೆ ಮದುವೆ ಮಾಡಿದ್ದಾರೆ. ಎರಡು ಎಕರೆ ಭೂಮಿ ಹೊಂದಿರುವ ಮಾರುತಿ ಅವರು, ಮುಸ್ತರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಪಡೆದಿದ್ದರು. ಖಾಸಗಿ ಸಾಲವೂ ಮಾಡಿದ್ದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.