ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣಬಸವ ವಿ.ವಿ ಸಂಸ್ಥಾಪನಾ ದಿನಾಚರಣೆ

Last Updated 29 ಜುಲೈ 2021, 12:46 IST
ಅಕ್ಷರ ಗಾತ್ರ

ಬೀದರ್: ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಕ್ ಕತ್ತರಿಸಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ನಾಲ್ಕನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ 56ನೇ ಜನ್ಮದಿನ ಆಚರಿಸಲಾಯಿತು.

ಸಂಸ್ಥೆ ಸಿಬ್ಬಂದಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಬಸವರಾಜ ದೇಶಮುಖ ಅವರಿಗೆ ಜನ್ಮದಿನದ ಶುಭ ಕೋರಿದರು.

ದೇಶಮುಖ ಅವರು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಮಾತನಾಡಿದ ಅನೇಕರು ಸ್ಮರಿಸಿದರು.

ರವಿ ಮಹಾರಾಜ್, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ, ಡಾ. ಉಮಾ ದೇಶಮುಖ, ಮಲ್ಲಿಕಾರ್ಜುನ ದೇಶಮುಖ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಶರಣಬಸವ ಪದವಿಪೂರ್ವ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜು ಪ್ರಾಚಾರ್ಯ ಸತೀಶ್ ಪ್ರತಾಪುರೆ, ಉಪನ್ಯಾಸಕರಾದ ರೇವಣಸಿದ್ದಪ್ಪ ಡೊಂಗರಗಾಂವ್, ಸೂರ್ಯಕಾಂತ ಗಂಬರಗಿ ಇದ್ದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು, ಶರಣಬಸವ ಪದವಿಪೂರ್ವ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಕಾಲೇಜು ಮತ್ತು ಶರಣಬಸವ ಪಬ್ಲಿಕ್ ಸ್ಕೂಲ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT