ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಭೀಕರ ಅಪಘಾತ: ನಾಲ್ವರ ಸಾವು

Published 28 ಫೆಬ್ರುವರಿ 2024, 15:52 IST
Last Updated 28 ಫೆಬ್ರುವರಿ 2024, 15:52 IST
ಅಕ್ಷರ ಗಾತ್ರ

ಬೀದರ್‌: ಭಾಲ್ಕಿ ತಾಲ್ಲೂಕಿನ ಸೇವಾ ನಗರ ತಾಂಡಾ ಸಮೀಪ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಬುಧವಾರ ನಸುಕಿನ ಜಾವ ಲಾರಿ ಹಾಗೂ ಪಿಕ್‌ ಅಪ್‌ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಉದಗೀರ್‌ನ ದಸ್ತಗೀರ್‌ ದವಳಸಾಬ್‌, ರಶೀದಾ ಮೊಹಮ್ಮದ್‌ ಶೇಕ್‌, ಅಮಾಹಮ್‌ ಶೇಕ್‌ ಹಾಗೂ ಹೈದರಾಬಾದ್‌ನ ಪಿಕ್‌ ಅಪ್‌ ವಾಹನ ಚಾಲಕ ವಲಿ ಮೃತರು. ಹತ್ತು ಜನ ಗಾಯಗೊಂಡಿದ್ದು, ಬ್ರಿಮ್ಸ್‌ಗೆ ದಾಖಲಿಸಲಾಗಿದೆ.

‘ಪಿಕ್‌ ಅಪ್‌ ವಾಹನವು ಉದಗೀರ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಬ್ಬಿನ ಲಾರಿ ಡಿಕ್ಕಿ ಹೊಡೆದಿದೆ. ಎಲ್ಲರೂ ಹೈದರಾಬಾದಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವಾಗ ಈ ಘಟನೆ ನಡೆದಿದೆ. ಲಾರಿ ಚಾಲಕನ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT