ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಮೂರು ದಿನಗಳಲ್ಲಿ ನಾಲ್ವರ ಸಾವು

ಮತ್ತೆ 88 ಮಂದಿಗೆ ಕೋವಿಡ್ ಸೋಂಕು ದೃಢ
Last Updated 1 ಆಗಸ್ಟ್ 2020, 16:06 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಶನಿವಾರ ಮತ್ತೆ 88 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ವೈರಾಣು ಪೀಡಿತರ ಸಂಖ್ಯೆ 2,263ಕ್ಕೆ ಹೆಚ್ಚಿದೆ. ಮೂರು ದಿನಗಳಲ್ಲಿ ನಾಲ್ವರು ಪುರುಷರು ಮೃತಪಟ್ಟಿದ್ದಾರೆ.

ಜಿಲ್ಲೆಯ 40 ವರ್ಷದ ಪುರುಷ ತೀವ್ರ ಉಸಿರಾಟ ತೊಂದರೆಯಿಂದಾಗಿ ಜುಲೈ 26 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜುಲೈ 29 ರಂದು ಮೃತಪಟ್ಟಿದ್ದಾರೆ. 70 ವರ್ಷ ವ್ಯಕ್ತಿ ಉಸಿರಾಟ ಸಮಸ್ಯೆಯಿಂದಾಗಿ ಜುಲೈ 27ರಂದು ಆಸ್ಪತ್ರೆಗೆ ದಾಖಲಾಗಿ 28 ರಂದು ಕೊನೆಯುಸಿರೆಳೆದಿದ್ದಾರೆ.

62 ವರ್ಷದ ಹಾಗೂ ಇನ್ನೊಬ್ಬ 65 ವರ್ಷದ ಪುರುಷರ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡು ಜುಲೈ 29 ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಜುಲೈ 30 ರಂದು ಇಬ್ಬರೂ ಮೃತಪಟ್ಟಿದ್ದರು. ಮೃತ ನಾಲ್ವರ ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಶನಿವಾರ ವರದಿ ಪಾಸಿಟಿವ್‌ ಬಂದಿದೆ.

ಜಿಲ್ಲೆಯಲ್ಲಿ 636 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿವೆ. ಬೀದರ್ ತಾಲ್ಲೂಕಿನಲ್ಲಿ 50 ಮಂದಿಗೆ ಸೋಂಕು ತಗುಲಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ 6, ಭಾಲ್ಕಿ ತಾಲ್ಲೂಕಿನಲ್ಲಿ 4, ಔರಾದ್ ತಾಲ್ಲೂಕಿನಲ್ಲಿ 15, ಬಸವಕಲ್ಯಾಣ ತಾಲ್ಲೂಕಿನಲ್ಲಿ 11 ಜನರಿಗೆ ಹಾಗೂ ನೆರೆ ರಾಜ್ಯದ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕೋವಿಡ್ ಆಸ್ಪತ್ರೆಯಿಂದ 61 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ 1,544 ಮಂದಿ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT