ಬೀದರ್: ಇಲ್ಲಿಯ ವಿಜಡಂ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ವರ್ಷ 100 ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ಉಚಿತ ಪ್ರವೇಶ ಕಲ್ಪಿಸುವುದಾಗಿ ಪ್ರಕಟಿಸಿದೆ.
50 ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ನೀಟ್ ತರಬೇತಿಯೊಂದಿಗೆ ಎರಡು ವರ್ಷಗಳ ಪಿಯುಸಿ ಶಿಕ್ಷಣ ಕೊಡಲಾಗುವುದು. ಇನ್ನೂ 50 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರೂಪದಲ್ಲಿ ಉಚಿತ ಶಿಕ್ಷಣ ಕಲ್ಪಿಸಲಾಗುವುದು ಎಂದು ವಿಜಡಂ ಕಾಲೇಜು ಕಾರ್ಯದರ್ಶಿ ಮಹಮ್ಮದ್ ಆಸಿಫೊದ್ದಿನ್ ತಿಳಿಸಿದ್ದಾರೆ.
‘ವಿಜಡಂ ವಿದ್ಯಾರ್ಥಿ ವೇತನ ಪರೀಕ್ಷೆ’ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುವುದು. ಕಾಲೇಜು ಈ ಬಾರಿ ವಿದ್ಯಾರ್ಥಿಗಳಿಗೆ ಒಟ್ಟು ₹. 2 ಕೋಟಿ ಶಿಷ್ಯವೇತನ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
2015 ರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ 25 ವಿದ್ಯಾರ್ಥಿಗಳು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 75 ವಿದ್ಯಾರ್ಥಿಗಳು ರಾಜ್ಯದ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಉಚಿತ ಪ್ರವೇಶ ಹಾಗೂ ಶಿಷ್ಯವೇತನ ಮಾಹಿತಿಗೆ ಕಾಲೇಜಿನ ವೆಬ್‍ಸೈಟ್ www.wisdominstitutions.com ನೋಡಬಹುದು. ಟೋಲ್ ಫ್ರೀ ಸಂಖ್ಯೆ 1800-123-9447, ಮೊಬೈಲ್ ಸಂಖ್ಯೆ 9448891008 ಅಥವಾ 9113018911ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.