ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ

Published 29 ಫೆಬ್ರುವರಿ 2024, 15:26 IST
Last Updated 29 ಫೆಬ್ರುವರಿ 2024, 15:26 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿಯ ನೌಬಾದ್‍ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶಿಬಿರದಲ್ಲಿ 130 ವಿದ್ಯಾರ್ಥಿಗಳಿಗೆ ಉಚಿತವಾಗಿ ದಂತ ತಪಾಸಣೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಉಚಿತ ಬ್ರಶ್ ವಿತರಿಸಲಾಯಿತು.

ಡಾ. ಸಿದ್ಧನಗೌಡ ಪಾಟೀಲ, ಡಾ. ಶರದ್, ಸುಚಿತಾ ಗ್ರೇಸ್, ಸಿಮ್ರಿತಿ, ಖಾಜಿದಾ, ಫರೀಝಾ ದಂತ ತಪಾಸಣೆ ನಡೆಸಿದರು. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ಕಪಿಲ್ ಪಾಟೀಲ ಹೇಳಿದರು. ಇದೇ ವೇಳೆ ಕೇಕ್ ಕತ್ತರಿಸಿ ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ 119ನೇ ಸಂಸ್ಥಾಪನಾ ದಿನ ಆಚರಿಸಲಾಯಿತು. 

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ಮಾಣಿಕ ಎಸ್. ಪವಾರ್, ರವಿ ವದ್ಲಮನಿ, ಎಸ್.ಬಿ. ಪಾಟೀಲ ದಂತ ವೈದ್ಯಕೀಯ ಕಾಲೇಜಿನ ಅಧ್ಯಕ್ಷ ಡಾ. ಸೂರ್ಯಕಾಂತ ಪಾಟೀಲ, ಡಾ. ರಘು ಕೃಷ್ಣಮೂರ್ತಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಕಾರ್ಯದರ್ಶಿ ಶಿವಕುಮಾರ ಪಾಖಾಲ್, ಸೂರ್ಯಕಾಂತ ರಾಮಶೆಟ್ಟಿ, ಡಾ. ರಿತೇಶ ಸುಲೇಗಾಂವ್, ಡಾ. ವಿನಯಕುಮಾರ ಬಿಯಾನಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT