ಕೋವಿಡ್ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ

ಬೀದರ್: ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ತಾಲ್ಲೂಕಿನ ಹಮಿಲಾಪುರದ ವಿ.ಎಂ. ರಾಂಪುರೆ ಆಂಗ್ಲಮಾಧ್ಯಮ ಪಬ್ಲಿಕ್ ಶಾಲೆ ಮುಂದೆ ಬಂದಿದೆ.
‘ಕೋವಿಡ್ ಸೋಂಕಿನಿಂದಾಗಿ ಸಾಕಷ್ಟು ಕುಟುಂಬಗಳು ತೊಂದರೆಗೆ ಒಳಗಾಗಿವೆ. ಅನೇಕ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಮಾನವೀಯ ನೆಲೆಯಲ್ಲಿ ಅಂಥ ಮಕ್ಕಳಿಗೆ ನೆರವಾಗಲು ನಿರ್ಧರಿಸಲಾಗಿದೆ’ ಎಂದು ಶಾಲೆಯ ಅಧ್ಯಕ್ಷ ಮಹೇಶ ಎಸ್. ರಾಂಪುರೆ ತಿಳಿಸಿದ್ದಾರೆ.
‘ನರ್ಸರಿಯಿಂದ ನಾಲ್ಕನೇ ತರಗತಿವರೆಗಿನ ಸಂತ್ರಸ್ತ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕೊಡಲಾಗುವುದು. ಬಸ್ ಸೌಕರ್ಯ ಸಹ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.
‘ಜೂನ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9731777282 ಗೆ ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.