ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26 ಜನರ ಉಚಿತ ನೇತ್ರ ಶಸ್ತ್ರಚಿಕಿತ್ಸೆ

Last Updated 5 ಸೆಪ್ಟೆಂಬರ್ 2021, 13:33 IST
ಅಕ್ಷರ ಗಾತ್ರ

ಬೀದರ್: 36ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅರಿವು ಕಾರ್ಯಕ್ರಮದ ಅಂಗವಾಗಿ ವೆಲ್‍ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ವತಿಯಿಂದ ನಗರದ ಡಾ. ಸಾಲಿನ್ಸ್ ನೇತ್ರ ಆಸ್ಪತ್ರೆಯಲ್ಲಿ 26 ಜನರ ಉಚಿತ ನೇತ್ರ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಉಚಿತ ಕನ್ನಡಕ ಹಾಗೂ ಔಷಧಿ ವಿತರಿಸಲಾಯಿತು.

ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವೆಲ್‍ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ನಿರ್ದೇಶಕಿ ಡಾ. ಸಿಬಿಲ್ ಸಾಲಿನ್ಸ್ ಅವರು,‘ಕಣ್ಣಿನ ಆರೋಗ್ಯದ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಸಲಹೆ ಮಾಡಿದರು.

ನೇತ್ರ ದಾನ ಮಹಾದಾನವಾಗಿದೆ. ಮರಣದ ನಂತರ ನೇತ್ರ ದಾನ ಮಾಡುವುದರಿಂದ ಅಂಧರ ಬಾಳಲ್ಲಿ ಬೆಳಕು ಮೂಡಿಸಬಹುದು ಎಂದು ಹೇಳಿದರು.

ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಅಧಿಕಾರಿ ಡಾ. ಮಹೇಶ ಬಿರಾದಾರ ಮಾತನಾಡಿ,‘ವೆಲ್‍ಮೆಗ್ನಾ ಗುಡ್ ನ್ಯೂಸ್ ಸಂಸ್ಥೆಯು ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ’ ಎಂದು ಹೇಳಿದರು.

ನಗರಸಭೆ ಮಾಜಿ ಉಪಾಧ್ಯಕ್ಷರಾದ ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್‍ರಾಜ್ ಪ್ರಸಾದ್, ಡಾ. ಕಾಶಿನಾಥ, ಡಾ. ವೀರೇಂದ್ರ ಪಾಟೀಲ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಂಜು, ಸುದೇಶ್ ಹಾಗೂ ಪ್ರಕಾಶ ಇದ್ದರು.

ಆಸ್ಪತ್ರೆಯ ಪುಟ್ಟರಾಜ ಬಲ್ಲೂರಕರ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT