ಎಲ್ಲರಿಗೂ ಉಚಿತ ಲಸಿಕೆ: ಚವಾಣ್ ಹರ್ಷ

ಬೀದರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದು, ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ನಿರ್ಧಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಯೋಗದಿನವಾದ ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಸಿಗಲಿದ್ದು, ಜಿಲ್ಲೆಯ ಪ್ರತಿಯೊಬ್ಬರು ತಪ್ಪದೇ ಲಸಿಕೆ ಪಡೆದು ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಯಾವೊಬ್ಬ ಬಡವರು ಹಸಿವಿನಿಂದ ಬಳಲಬಾರದು ಎನ್ನುವ ಉದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ರೇಷನ್ ಒದಗಿಸುವ ಯೋಜನೆಯನ್ನು ದೀಪಾವಳಿವರೆಗೂ ಮುಂದುವರೆಸಲು ತೀರ್ಮಾನಿಸಿರುವುದು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.