ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ ಸಂಸ್ಥೆಯಿಂದ ವಾಹನ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
Last Updated 5 ಮೇ 2021, 15:22 IST
ಅಕ್ಷರ ಗಾತ್ರ

ಬೀದರ್: ಗ್ರಾಮೀಣ ಪ್ರದೇಶದ ಕೊರೊನಾ ಸೋಂಕಿತರು ಹಾಗೂ ಶಂಕಿತರನ್ನು ನಗರ ಪ್ರದೇಶದ ಆಸ್ಪತ್ರೆಗೆ ಸಾಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬೀದರ್ ತಾಲ್ಲೂಕಿಗೆ ಎರಡು ವಾಹನಗಳನ್ನು ಒದಗಿಸಿದೆ.

ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಸದ ಭಗವಂತ ಖೂಬಾ ವಾಹನಗಳ ಸೇವೆಗೆ ಚಾಲನೆ ನೀಡಿದರು.

‘ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಪ್ರದೇಶದ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ರಾಜ್ಯದ ವಿವಿಧ ಪ್ರದೇಶಗಳು ಸೇರಿ ಒಟ್ಟು 350 ವಾಹನಗಳನ್ನು ಕಲ್ಪಿಸಿದ್ದಾರೆ. ಬೀದರ್ ತಾಲ್ಲೂಕಿಗೆ ಎರಡು ವಾಹನಗಳನ್ನು ನೀಡಲಾಗಿದೆ’ ಎಂದು ಯೋಜನೆಯ ಬೀದರ್ ತಾಲ್ಲೂಕು ಯೋಜನಾಧಿಕಾರಿ ರಮೇಶ ಸಿ. ತಿಳಿಸಿದರು.

‘ಮೇ 15ರ ವರೆಗೆ ಬೆಳಿಗ್ಗೆ 6 ರಿಂದ ಸಂಜೆ 8 ರವರೆಗೆ ವಾಹನಗಳ ಸೇವೆ ಲಭ್ಯ ಇರಲಿದೆ. ಸೋಂಕಿತರನ್ನು ಅಸ್ಪತ್ರೆಗೆ ಸಾಗಿಸಲು ವಾಹನದ ಅವಶ್ಯಕತೆ ಇದ್ದವರು ಮೊಬೈಲ್ ಸಂಖ್ಯೆ 9448824302 ಅಥವಾ 9900269913ಗೆ ಸಂಪರ್ಕಿಸಬಹುದು’ ಎಂದು ಹೇಳಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ತಹಶೀಲ್ದಾರ್ ಗಂಗಾದೇವಿ, ಪುನಿತ್ ಸಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT