ಶುಕ್ರವಾರ, ಜೂನ್ 18, 2021
28 °C

ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ಜಿಲ್ಲೆಗೆ 50 ಆಕ್ಸಿಜನ್ ಜಂಬೊ ಸಿಲಿಂಡರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲಾಡಳಿತದ ಮನವಿ ಮೇರೆಗೆ ಬೆಂಗಳೂರಿನ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಜಿಲ್ಲೆಗೆ 50 ಆಕ್ಸಿಜನ್ ಜಂಬೊ ಸಿಲಿಂಡರ್ಗಳನ್ನು ನೀಡಿದೆ.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮೇ 21ರಂದು 50 ಆಕ್ಸಿಜನ್ ಜಂಬೊ ಸಿಲಿಂಡರ್‌ಗಳ ಸರಬರಾಜು ಪತ್ರವನ್ನು ಅಜೀಂ ಪ್ರೇಮ ಜಿ ಫೌಂಡೇಶನ್‌ನ ಬೀದರ್ ಜಿಲ್ಲಾ ಸಂಯೋಜಕ ಶಿವಕುಮಾರ ಅವರು ಜಿಲ್ಲಾಧಿಕಾರಿ ರಾಮಚಂದ್ರನ್‌ ಉಪಸ್ಥಿತಿಯಲ್ಲಿ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ ಅವರಿಗೆ ಹಸ್ತಾಂತರಿಸಿದರು.

ಕಳೆದ ವರ್ಷ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೀದರ್ ಜಿಲ್ಲೆಗೆ ಏಳು ಸಾವಿರ ಎನ್95 ಮಾಸ್ಕ್ ಹಾಗೂ ಪಿಪಿಇಕಿಟ್‌ಗಳನ್ನು ನೀಡಿತ್ತು. ಪ್ರಸ್ತುತ 200ಆಕ್ಸಿಜನ್ ಕಾನ್ಸ್ಂಟ್ರೇಟರ್ಗಳನ್ನು ನೀಡಲು ನಿರ್ಧರಿಸಿದೆ ಎಂದು ಶಿವಕುಮಾರ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಡಿಎಚ್‌ಒ ಡಾ.ವಿ.ಜಿ.ರೆಡ್ಡಿ, ಡಾ.ಮಹೇಶ ತೊಂಡಾರೆ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು