ಗುರುವಾರ , ಡಿಸೆಂಬರ್ 1, 2022
20 °C
ಶಿಕ್ಷಣ ಸಚಿವ ಬಿ.ಸಿ. ನಾಗೇಶಗೆ ಮನವಿ ಪತ್ರ ಸಲ್ಲಿಕೆ

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಬೇಡಿಕೆ ಈಡೇರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪ್ರತಿ ಪ್ರಾಥಮಿಕ ಶಾಲೆಗೆ ಗ್ರುಪ್ ಡಿ ಶಿಕ್ಷಕರನ್ನು ನೇಮಕ ಮಾಡಬೇಕು ಎನ್ನುವುದು ಸೇರಿದಂತೆ 11 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಸರ್ಕಾರವನ್ನು ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಅವರ ನೇತೃತ್ವದಲ್ಲಿ ಔರಾದ್‍ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ ಪ್ರೌಢಶಾಲೆ ಸಹ ಶಿಕ್ಷಕರ ವೇತನ ಶ್ರೇಣಿ ಹಾಗೂ ಎರಡನೇ ಬಡ್ತಿಗೆ ಹಿರಿಯ ಮುಖ್ಯಶಿಕ್ಷಕರಿಗೆ ಪ್ರೌಢಶಾಲಾ ಮುಖ್ಯಶಿಕ್ಷಕರ ವೇತನ ಶ್ರೇಣಿ ನೀಡಬೇಕು. ಸೇವಾ ಹಿರಿತನ ಪರಿಗಣಿಸಿ ಶಿಕ್ಷಣ ಸಂಯೋಜಕ ಹುದ್ದೆಗೆ ನೇಮಕ ಮಾಡಬೇಕು. ಪ್ರೌಢಶಾಲಾ ಮುಖ್ಯಶಿಕ್ಷಕರ ಮಾದರಿಯಲ್ಲಿ ವರ್ಷಕ್ಕೆ 30 ಗಳಿಕೆ ರಜೆ ಕೊಡಬೇಕು. ನಿರ್ವಹಣೆಗಾಗಿ ಕಿರಿಯ ಪ್ರಾಥಮಿಕ ಶಾಲೆಗೆ ವಾರ್ಷಿಕ ₹ 50 ಸಾವಿರ, ಹಿರಿಯ ಪ್ರಾಥಮಿಕ ಶಾಲೆಗೆ ₹ 1 ಲಕ್ಷ ಹಾಗೂ ಮಾದರಿ ಪ್ರಾಥಮಿಕ ಶಾಲೆಗೆ ₹ 1.5 ಲಕ್ಷ ಒದಗಿಸಬೇಕು. ದಸರಾ ಮಧ್ಯಂತರ ರಜೆ 14 ದಿನಗಳಿಂದ 29 ದಿನಗಳಿಗೆ ಏರಿಸಬೇಕು.

ಬಿಸಿಯೂಟ ನಿರ್ವಹಣೆ ಅನುದಾನ ಪ್ರತಿ ತಿಂಗಳ 1ನೇ ದಿನಾಂಕದಂದೇ ಮುಖ್ಯಶಿಕ್ಷಕರ ಖಾತೆಗೆ ಜಮೆ ಮಾಡಬೇಕು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು. ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿ, ಜುಲೈನಿಂದಲೇ ಅನ್ವಯವಾಗುವಂತೆ ಕೇಂದ್ರ ಮಾದರಿ ವೇತನ ನೀಡಬೇಕು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ವರ್ಗಾವಣೆಯ ಕನಿಷ್ಠ 3 ವರ್ಷದ ಸೇವಾ ಅವಧಿಯನ್ನು ರದ್ದುಪಡಿಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.