ಹುಲಸೂರ: ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದ ಬಸವೇಶ್ವರ ವೃತ್ತದ ಸಮೀಪದ ಕಿರಾಣಿ ಅಂಗಡಿ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಭಾನುವಾರ ಪತ್ತೆಯಾಗಿದೆ.

ಗಡಿಗೌಡಗಾಂವ ನಿವಾಸಿ ಜೈಹಿಂದ್ ಮಲ್ಲಪ್ಪ ಮೇತ್ರೆ ಅವರು ಮಧ್ಯಾಹ್ನ ಸುಮಾರು 12.15ರ ವೇಳೆಗೆ ಅಂಗಡಿ ಯಿಂದ ಹೊರಬಂದಾಗ ಗಮನಕ್ಕೆ ಬಂದಿದೆ. ಬಳಿಕ ಅವರು ಗ್ರಾಮಸ್ಥ ವಿಜಯಕುಮಾರ ಹಾವಗೆಪ್ಪ ಮಂಠಾಳೆ ಅವರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಹುಲಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಯಿ–ನರಿಗಳಿಂದ ಮೃತದೇಹಕ್ಕೆ ಹಾನಿಯಾಗದಂತೆ ಹಾಗೂ ಗುರುತು ಪತ್ತೆಗಾಗಿ ಶಿಶುವಿನ ಮೃತದೇಹವನ್ನು ಹುಲಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಸಂರಕ್ಷಿಸಲಾಗಿದೆ. ವೈದ್ಯಾಧಿಕಾರಿಗಳ ಪ್ರಾಥಮಿಕ ಪರಿಶೀಲನೆಯಿಂದ ಗಂಡು ಮಗು ಎಂದು ತಿಳಿದು ಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮೇ 9ರ ರಾತ್ರಿ 10 ಗಂಟೆಯಿಂದ ಮೇ 10ರ ಮಧ್ಯಾಹ್ನ 12.15ರ ಅವಧಿಯಲ್ಲಿ ಅಪರಿಚಿತರು ಶಿಶುವಿಗೆ ಜನ್ಮ ನೀಡಿ, ಜನನವನ್ನು ಬಚ್ಚಿಡುವ ಉದ್ದೇಶದಿಂದ ಮೃತದೇಹವನ್ನು ರಹಸ್ಯವಾಗಿ ಚರಂಡಿಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಜೈಹಿಂದ್ ಮಲ್ಲಪ್ಪ ಮೇತ್ರೆ ನೀಡಿದ ದೂರಿನ ಆಧಾರದಲ್ಲಿ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-983552597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.