ಶನಿವಾರ, ಅಕ್ಟೋಬರ್ 1, 2022
20 °C

ಗಾಂಧಿಗಂಜ್ ಬ್ಯಾಂಕ್: ಸಾಲದ ಬಡ್ಡಿ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಗಾಂಧಿಗಂಜ್ ಸಹಕಾರ ಬ್ಯಾಂಕ್‍ನ ಸದಸ್ಯರಿಗೆ ವಿವಿಧ ಸಾಲಗಳ ಮೇಲಿನ ಬಡ್ಡಿ ಕಡಿತಗೊಳಿಸಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಎ. ಪಾಟೀಲ ಗಾದಗಿ ಹೇಳಿದರು.

ಶೇ 13 ರಷ್ಟು ಬಡ್ಡಿ ದರದಲ್ಲಿ ಆಸ್ತಿ ಅಡಮಾನ ಸಾಲ, ಶೇ 12 ರಷ್ಟು ಬಡ್ಡಿ ದರದಲ್ಲಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸಂಬಳ ಕಡಿತ ಪತ್ರದ ಆಧಾರದ ಮೇಲೆ ವೈಯಕ್ತಿಕ ಸಾಲ ಹಾಗೂ ಶೇ 10 ರಷ್ಟು ಬಡ್ಡಿ ದರದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸಾಲ ನೀಡಲು ನಿರ್ಧರಿಸಲಾಗಿದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪತ್ರಿಕಾ ದಿನಾಚರಣೆ: ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಕೋಡಗೆ, ಮಡಿವಾಳಪ್ಪ ಗಂಗಶೆಟ್ಟಿ, ಸೂರ್ಯಕಾಂತ ಶೆಟಕಾರ್, ಜಯಕುಮಾರ ಕಾಂಗೆ, ಶಾಂತಾ ಜೈರಾಜ ಖಂಡ್ರೆ, ಕಾಶೀನಾಥ ಶೆಟಕಾರ್, ಭರತ ಶೆಟಕಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು