ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಿ: ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಗಣೇಶ ಮಂಡಳಿ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿಕೆ
Last Updated 19 ಆಗಸ್ಟ್ 2022, 14:07 IST
ಅಕ್ಷರ ಗಾತ್ರ

ಬೀದರ್‌: ‘ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಗಣೇಶ ಉತ್ಸವ ಸರಳವಾಗಿ ಆಚರಿಸಲಾಗುತ್ತಿತ್ತು. ಆದರೆ. ಈಗ ಕೋವಿಡ್‌ ನಿಯಮ ಸಡಿಲವಾಗಿರುವುದರಿಂದ ಗಣೇಶ ಉತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಮಂಡಳಿ ಸಲಹಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನೆರೆಯ ಮಹಾರಾಷ್ಟ್ರದಲ್ಲಿ ಆಚರಿಸಿದಂತೆ ಇಲ್ಲಿಯೂ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು. ನಾವೆಲ್ಲ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕಾರಣ ದೇಶ ಭಕ್ತಿಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ‍ಪ್ರತಿಷ್ಠಾಪಿಸಲಾಗುವ ಗಣಪತಿ ಮಂಟಪಗಳಲ್ಲಿ ಮಹಿಳೆಯರು, ವೃದ್ಧರು ಹಾಗೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಅಶ್ಲೀಲ ಚಿತ್ರಗಳ ಪ್ರದರ್ಶನ ಮಾಡಬಾರದು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಧ್ವನಿವರ್ಧಗಳನ್ನು ಬಳಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಮಾತನಾಡಿ, ಕಳೆದ ವರ್ಷ 1,280 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಈ ವರ್ಷ ಅಂದಾಜು 1428 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಳ್ಳಲಿವೆ. ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಸರ್ಕಾರದ ಸುತ್ತೋಲೆಯಂತೆ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ ಎಂದು ತಿಳಿಸಿದರು.

ಗಣಪತಿ ಪ್ರತಿಷ್ಠಾಪನಾ ಮಂಡಳಿಯ ಸದಸ್ಯರು ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಗೆ ತಮ್ಮ ಹೆಸರು, ಮೊಬೈಲ್ ನಂಬರ್ ನೀಡಬೇಕು. ಮಂಡಳಿಗಳ ಪತ್ರ ಪರಿಶೀಲಿಸಿ ಪೊಲೀಸ್‌ ಠಾಣೆಗಳ ಮೂಲಕ ಆಯಾ ಗಣೇಶೋತ್ಸವ ಮಂಡಳಗಳಿಗೆ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಗೃಹರಕ್ಷಕ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಬೀದರ್‌ ಉಪ ವಿಭಾಗಾಧಿಕಾರಿ ಮಹಮ್ಮದ್ ನಯೀಮ್ ಮೋಮಿನ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣೇಶ ಮಂಡಳಿಯ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT