ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣೇಶೋತ್ಸವದ ನಿಮಿತ್ತ ಎಲ್ಲೆಡೆ ಗಣೇಶ ಮೂರ್ತಿಗಳ ಮಾರಾಟ ಜೋರಾಗಿ ನಡೆಯುತ್ತಿದೆ.
‘ಕಳೆದ 70 ವರ್ಷಗಳಿಂದ ಪಟ್ಟಣದ ಕುಟುಂಬವೊಂದು ಮಣ್ಣಿನ ಗಣಪತಿ ತಯಾರಿಸಿಕೊಂಡು ಬರುತ್ತಿದ್ದಾರೆ. ನಮ್ಮ ಪೂರ್ವಜರ ಕಾಲದಿಂದಲೂ ಮಣ್ಣಿನ ಗಣಪತಿ ಮೂರ್ತಿ ಮಾಡುವ ಪದ್ಧತಿಯಿತ್ತು. ಇದನ್ನು ನಾವು ಮುಂದುವರಿಸಿಕೊಂಡು ಬರುತ್ತಿದ್ದೇವೆ’ ಎಂದು ಮಣ್ಣಿನ ಗಣಪತಿ ತಯಾರಕ ಅನಿಲ ಹೇಳುತ್ತಾರೆ.
‘ಇತ್ತೀಚಿನ ದಿನಗಳಲ್ಲಿ ಗಣಪತಿ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳಿಂದ ಅಲಂಕರಿಸಿ, ಮಾರಾಟ ಮಾಡಲಾಗುತ್ತಿದೆ. ಆದರೆ ಜನರು ಪರಿಸರ ಮಾಲಿನ್ಯದ ಬಗ್ಗೆ ಅರಿತುಕೊಂಡಿದ್ದಾರೆ. ನಮ್ಮಲ್ಲಿ ಪಟ್ಟಣದ ಸೇರಿದಂತೆ ತಾಲ್ಲೂಕಿನ ದುಬಲಗುಂಡಿ, ಹಳ್ಳಿಖೇಡ್ ಬಿ. ಹುಡಗಿ, ಸಿಂಧನಕೇರಾ, ಮದರಗಾಂವ ಸೇರಿದಂತೆ ವಿವಿಧ ಗ್ರಾಮಗಳ ಜನರು ಬಂದು ಈಗಾಗಲೇ ಸುಮಾರು 100ಕ್ಕೂ ಮಣ್ಣಿನ ಗಣಪತಿ ಖರೀದಿಸಿದ್ದಾರೆ’ ಎಂದು ತಯಾರಕ ಗಜಾನಂದ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.