ಭಾನುವಾರ, ಸೆಪ್ಟೆಂಬರ್ 26, 2021
28 °C

6.5 ಕ್ವಿಂಟಲ್ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಜಂಬಗಿ ಬಳಿಯ ಘಾಮಾ ತಾಂಡಾದ ಗೋಪಾಲ ಎಂಬುವವರ ಮನೆ ಮೇಲೆ ಶನಿವಾರ ತಡರಾತ್ರಿ ದಾಳಿ ಮಾಡಿದ ಪೊಲೀಸರು ಸುಮಾರು 6.5 ಕ್ವಿಂಟಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

‘ಬೇರೆಡೆ ಸಾಗಿಸುವ ಉದ್ದೇಶದಿಂದ ಗಾಂಜಾ ಪ್ಯಾಕೆಟ್‌ಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇದರ ಮೌಲ್ಯ ₹30 ಲಕ್ಷಕ್ಕೂ ಅಧಿಕ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಗೋಪಾಲ ತಲೆ ಮರೆಸಿಕೊಂಡಿದ್ದು, ಕೃತ್ಯಕ್ಕೆ ಸಹಕರಿಸಿದ್ದಾರೆ ಎನ್ನಲಾದ ಅನಿಲ್ ಮತ್ತು ವಿಜಯ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಒಂದು ಕಾರು, ಮೂರು ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು