ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ಕ್ಷೇತ್ರಕ್ಕೆ ಗವಾಯಿಗಳ ಕೊಡುಗೆ ಅನನ್ಯ: ಈಶ್ವರ ಖಂಡ್ರೆ

Published 30 ಏಪ್ರಿಲ್ 2024, 16:09 IST
Last Updated 30 ಏಪ್ರಿಲ್ 2024, 16:09 IST
ಅಕ್ಷರ ಗಾತ್ರ

ಬೀದರ್‌: ‘ಪಂಡಿತ್ ಪಂಚಾಕ್ಷರ ಗವಾಯಿಗಳು ಮತ್ತು ಪಂ.ಪುಟ್ಟರಾಜ ಕವಿ ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಲಿಂಗೈಕ್ಯ ಪಂಡಿತ್ ಪಂಚಾಕ್ಷರ ಗವಾಯಿ ಅವರ 79ನೇ ಪುಣ್ಯ ತಿಥಿ ಮತ್ತು ಪುಟ್ಟರಾಜ ಕವಿಗವಾಯಿಗಳ 13ನೇ ಪುಣ್ಯತಿಥಿ ಅಂಗವಾಗಿ ನಗರದ ಗಣೇಶ ಕಾಲೊನಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂಗೀತ ಹಾಗೂ ಸನ್ಮಾನ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಗವಾಯಿಗಳು ಸವಾಲನ್ನು ಮೆಟ್ಟಿ ಜೀವನವನ್ನು ಹೇಗೆ ಸಾರ್ಥಕ ಪಡಿಸಿಕೊಳ್ಳಬಹುದು ಎಂಬ ಸ್ಪಷ್ಟ ಕಲ್ಪನೆಯನ್ನು ಕಟ್ಟಿಕೊಟ್ಟಿದ್ದಾರೆ. ಅವರಿಬ್ಬರೂ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ನಮ್ಮೆಲ್ಲರ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ ಎಂದು ತಿಳಿಸಿದರು.

ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸಂಸ್ಕೃತಿ, ಸಂಸ್ಕಾರ ಉಳಿದರೆ ಮಾತ್ರ ನಮ್ಮತನ ಉಳಿಯಲು ಸಾಧ್ಯ. ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ನಾವು ನಮ್ಮತನ ಉಳಿಸಿಕೊಳ್ಳದಿದ್ದರೆ ಬದುಕಿಗೆ ಸಾರ್ಥಕತೆ ಇರುವುದಿಲ್ಲ. ಇದಕ್ಕೆ ಸಂಸ್ಕೃತಿ, ಪರಂಪರೆಯ ಸಂರಕ್ಷಣೆ ಅತ್ಯಗತ್ಯ ಎಂದರು.

ಧನರಾಜ ಹಂಗರಗಿ, ಜಗನ್ನಾಥ ಹೆಬ್ಬಾಳೆ ಮತ್ತಿತರರು ಪಾಲ್ಗೊಂಡಿದ್ದರು. ಸಂಗೀತ ಕಾರ‍್ಯಕ್ರಮ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT