ಗುರುವಾರ , ಡಿಸೆಂಬರ್ 8, 2022
18 °C

‘ಲಿಂಗ ತಾರತಮ್ಯ ನಿವಾರಣೆಯಿಂದ ಸಮಾಜದ ಪ್ರಗತಿʼ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ‘ಲಿಂಗ ತಾರತಮ್ಯ ನಿವಾರಣೆಯಾದಲ್ಲಿ ಸಮಾಜದ ಸಮಗ್ರ ಪ್ರಗತಿ ಸಾಧ್ಯ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಚಾಂಗಲೇರಾ ಹೇಳಿದರು.

ತಾಲ್ಲೂಕಿನ ಉಡಬನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ ಹಾಗೂ ಮಕ್ಕಳ ಗ್ರಾಮ ಸಭೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಸಮಾನವಾದ ಹಕ್ಕು ಸಿಗಬೇಕಿದೆ. ಉದ್ಯೋಗ ಕ್ಷೇತ್ರದಲ್ಲಿಯೂ ಸಮಾನ ವೇತನ ಲಭಿಸಬೇಕು. ದೌರ್ಜನ್ಯ ಮುಕ್ತ ಸಮಾಜ ಎಲ್ಲೆಡೆ ನಿರ್ಮಾಣವಾಗಬೇಕು. ಮಕ್ಕಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಲಭಿಸಬೇಕು. ಅವರ ವಿಚಾರಗಳಿಗೆ ಎಲ್ಲೆಡೆ ಮನ್ನಣೆ ನೀಡಬೇಕು ಎಂದು ತಿಳಿಸಿದರು.

ಮಕ್ಕಳು ಗ್ರಾಮದ ಹಲವು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಶಿಕ್ಷಕರು, ಗ್ರಾಮದ ಗಣ್ಯರು ಹಾಗೂ ವಿವಿಧ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು