ಗುರುವಾರ , ಮಾರ್ಚ್ 23, 2023
30 °C
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ

ನಿರ್ಗತಿಕ ಮಕ್ಕಳಿಗೆ ಕೋವಿಡ್ ಲಸಿಕೆ ಕೊಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಏಕ ಪೋಷಕತ್ವ ಹಾಗೂ ನಿರ್ಗತಿಕ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಬೇಕು. ಇದಕ್ಕಾಗಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧೀನದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಹಾಲುಣಿಸುವ ತಾಯಂದಿರು ಹಾಗೂ ಗರ್ಭೀಣಿಯರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು ಕೊಡಬೇಕು. ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ನಿವೇಶನ ಹುಡುಕಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳು ಇದಕ್ಕೆ ಅಗತ್ಯ ಸಹಕಾರ ನೀಡಬೇಕು’ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್.ಮಾತನಾಡಿ, ‘ಜಿಲ್ಲೆಯಲ್ಲಿ ಜನವರಿಯಿಂದ ಜೂನ್ ಅಂತ್ಯದ ವರೆಗೆ ಸಾಮಾನ್ಯವಾಗಿ 188.3 ಮಿ.ಮೀ ಮಳೆಯಾಗುತ್ತದೆ. ಆದರೆ, 340.8 ಮಿ.ಮೀ. ಮಳೆಯಾಗಿದೆ’ ಎಂದು ತಿಳಿಸಿದರು.

‘ಮುಂಗಾರು ಹಂಗಾಮಿನಲ್ಲಿ ಒಟ್ಟು ಬೆಳೆ ಬಿತ್ತನೆ ಕ್ಷೇತ್ರ 3,70,982 ಹೆಕ್ಟೇರ್ ಪ್ರದೇಶದ ಪೈಕಿ ಇದುವರೆಗೆ 2,25,710 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಶೇ.61ರಷ್ಟು ಸಾಧನೆಯಾಗಿದೆ. 1,45,272 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿದೆ. ಬಿತ್ತನೆ ಇನ್ನೂ ಮುಂದುವರಿದಿದೆ’ ಎಂದರು.

‘ಬೀದರ್ ಜಿಲ್ಲೆಯ ಮುಖ್ಯ ಬೆಳೆಯಾದ ಸೋಯಾಬೀನ್ ಜಿಲ್ಲೆಯಲ್ಲಿ 1,82,448 ಹೆಕ್ಟೇರ್ ಪ್ರದೇಶ ಗುರಿಯ ಪೈಕಿ 1,36,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶರಣಯ್ಯ ಮಠಪತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.