ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲೆಯ ಪ್ರಗತಿಗೆ ಅವಕಾಶ ಕೊಡಿ: ಸಾಗರ ಖಂಡ್ರೆ ಮನವಿ

Published 25 ಮಾರ್ಚ್ 2024, 15:36 IST
Last Updated 25 ಮಾರ್ಚ್ 2024, 15:36 IST
ಅಕ್ಷರ ಗಾತ್ರ

ಭಾಲ್ಕಿ: ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶ ನೀಡಬೇಕು ಎಂದು ಬೀದರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.

ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ ಅವರು, ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರನ್ನು ಸನ್ಮಾನಿಸಿ, ಆಶೀರ್ವಾದ ಪಡೆದು ಮಾತನಾಡಿದರು.

ಜಿಲ್ಲೆಯ ಮತದಾರರ ಆಶೀರ್ವಾದ, ವಿಶ್ವಾಸದೊಂದಿಗೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ನನ್ನದೇ ದೂರದೃಷ್ಟಿಯಿದ್ದು, ತಂದೆ ಈಶ್ವರ ಖಂಡ್ರೆ ಅವರ ಮಾದರಿಯಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಸಂಕಲ್ಪವಿದೆ. ಸ್ವಾಮೀಜಿಯವರು, ಮಹಿಳೆಯರು, ಹಿರಿಯರು, ಯುವಕರು ಸೇರಿ ಎಲ್ಲರೂ ಬರುವ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಯುವಕರಿಗೆ ಮಣೆ ಹಾಕುವ ಉದ್ದೇಶದಿಂದ ಪುತ್ರ ಸಾಗರ ಖಂಡ್ರೆ ಅವರನ್ನು ಕಣಕ್ಕಿಳಿಸಲಾಗಿದೆ. ಶಾಸಕ, ಸಚಿವನಾಗಿ ತಾಲ್ಲೂಕು, ಜಿಲ್ಲೆಯ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಜಿಲ್ಲೆಯನ್ನು ಶೈಕ್ಷಣಿಕ, ನೀರಾವರಿ, ಆರೋಗ್ಯ ಕ್ಷೇತ್ರದ ಜತೆಗೆ ಆರ್ಥಿಕ ಪ್ರಗತಿಗೆ ನನಗೆ ಇನ್ನಷ್ಟು ಶಕ್ತಿ ತುಂಬಬೇಕಾದರೇ ಸಾಗರ ಖಂಡ್ರೆ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದು ತಿಳಿಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಬೀದರ್ ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕದ ಪ್ರಗತಿಯಲ್ಲಿ ಖಂಡ್ರೆ ಮನೆತನದ ಕೊಡುಗೆ ದೊಡ್ಡದಿದೆ’ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ರಾಜ್ಯದಲ್ಲಿಯೇ ಖಂಡ್ರೆ ಮನೆತನ ಮಾದರಿಯಾಗಿ ಗುರುತಿಸಿ ಕೊಂಡಿದೆ’ ಎಂದು ಹೇಳಿದರು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಿರ್ದೇಶಕಿ ಗೀತಾ ಈಶ್ವರ ಖಂಡ್ರೆ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಶಶಿಧರ ಕೋಸಂಬೆ, ರವೀಂದ್ರ ಚಿಡಗುಪ್ಪೆ, ಗುತ್ತಿಗೆದಾರ ರಾಜಕುಮಾರ ಬಿರಾದಾರ, ಬಾಬು ಬೆಲ್ದಾಳ, ಸವಿತಾ ಭೂರೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT