ಮಂಗಳವಾರ, ಸೆಪ್ಟೆಂಬರ್ 21, 2021
27 °C

ಹುತ್ತದ ಬದಲಿಗೆ ಬಡ ಮಕ್ಕಳಿಗೆ ಹಾಲು ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಹುತ್ತಗಳಿಗೆ ಹಾಲು ಎರೆಯುವ ಬದಲು ಬಡ ಮಕ್ಕಳಿಗೆ ನೀಡಬೇಕು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಬಿ.ರಾಠೋಡ್ ಹೇಳಿದರು.

ನಗರದ ರಾಜಗೊಂಡ ಕಾಲೊನಿಯಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯಿಂದ 200ಕ್ಕೂ ಹೆಚ್ಚು ಬಡ ಮಕ್ಕಳಿಗೆ ನಾಗರ ಪಂಚಮಿ ನಿಮಿತ್ತ ಹಾಲು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಾವುಗಳಿಗೆ ಹಾಲು ಕೊಡುವುದು ವೈಜ್ಞಾನಿಕ ಕ್ರಮವಲ್ಲ. ಬದಲಿಗೆ ಬಡ ಮಕ್ಕಳಿಗೆ ನೀಡಿದರೆ ಅವರ ಹೊಟ್ಟೆ ತುಂಬುತ್ತದೆ ಎಂದರು.

ಮಮ್ಲಾಜ್, ಸುದರ್ಶನ ಮೊದಲಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.