ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾವಿದರಿಗೆ ಕಾರ್ಯಕ್ರಮ ನೀಡಿ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಆಗ್ರಹ

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಆಗ್ರಹ
Last Updated 9 ಜುಲೈ 2021, 3:40 IST
ಅಕ್ಷರ ಗಾತ್ರ

ಬೀದರ್‌: ಕಲ್ಯಾಣ ಕರ್ನಾಟಕದ ಕಲಾವಿದರಿಗೆ ಇಲಾಖೆಯಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು ಹಾಗೂ ಲಾಕ್‍ಡೌನ್ ಸಂದರ್ಭದಲ್ಲಿ ಘೋಷಣೆ ಮಾಡಿದ ಸಹಾಯ ಧನ ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಆಗ್ರಹಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಿಗೆ ಬರೆದ ಮನವಿಪತ್ರವನ್ನು ಇಲಾಖೆಯ ಜಂಟಿ ನಿರ್ದೇಶಕ ಬಳವಂತರಾವ್ ಪಾಟೀಲ ಅವರಿಗೆ ಗುರುವಾರ ಬೀದರ್‌ನಲ್ಲಿ ಸಲ್ಲಿಸಿದರು.

ಈ ಭಾಗದಲ್ಲಿ ಕೋವಿಡ್‌ ಕಾರಣ ಎರಡು ವರ್ಷಗಳಿಂದ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಸಂಕಷ್ಟದಲ್ಲಿರುವ ಕಲಾವಿದರ ನೆರವಿಗೆ ಬರಬೇಕು ಎಂದು ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮನವಿ ಮಾಡಿದರು.

ಮಾಸಾಶನಕ್ಕೆ ಅರ್ಜಿ ಸಲ್ಲಿಸಿರುವ ಕಲಾವಿದರ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಬೇಕು. ಮಾಸಾಶನಕ್ಕೆ ಸರ್ಕಾರ ನಿಗದಿಪಡಿಸಿರುವ ವಯೋಮಿತಿಯು 58ರಿಂದ 50ಕ್ಕೆ ಇಳಿಸಬೇಕು. ಗೌರವ ಧನವನ್ನು ₹5 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ರೈತರಿಗೆ ನೀಡಲು ನಿರ್ಧರಿಸಿರುವ ಗುರುತಿನ ಚೀಟಿ ಮಾದರಿಯಲ್ಲಿ ಕಲಾವಿದರಿಗೂ ಗುರುತಿನ ಚೀಟಿ ಹಾಗೂ ಬಸ್ ಪಾಸ್ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ರಾಜಶೇಖರ ಒಟಗೆ, ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾದ ಸುನೀಲ ಕಡ್ಡೆ, ಮಹರ್ಷಿ ವಾಲ್ಮೀಕಿ ಸೋಶಿಯಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಸುನೀಲ ಭಾವಿಕಟ್ಟಿ, ಅಮೂಲ್ಯ ಏಜುಕೇಶನ್ ಟ್ರಸ್ಟ್ ಅಧ್ಯಕ್ಷ ಶ್ರಿಮಂತ ಸಪಾಟೆ, ಶಂಕರ ಚೊಂಡಿ, ಮಹೇಶ ಕೋಲಿ ಅಲಿಯಂಬರ್, ಮಹೇಶ ಮಾಹಿ, ಶರಣಪ್ಪ ಖಾಶೆಂಪೂರ್, ರವೀಂದ್ರ ಗುಮಾಸ್ತಿ, ರತಿಕಾಂತ, ಸಂಗ್ರಾಮ್, ಸಂತೋಷ ಜೋಳದಾಬಕೆ, ಚಂದ್ರಕಾಂತ ಹಳ್ಳಿಖೇಡಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT