ಮಂಗಳವಾರ, ಮಾರ್ಚ್ 28, 2023
33 °C
₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಖಂಡ್ರೆ ಚಾಲನೆ

‘ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ’: ಶಾಸಕ ಈಶ್ವರ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಕೋಸಂ-ವಿಲಾಸ ಪುರ್ ವರೆಗಿನ ರಸ್ತೆ ಕಾಮಗಾರಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿ ಈ ರಸ್ತೆ ನಿರ್ಮಾಣಕ್ಕೆ ₹1 ಕೋಟಿ ಅನುದಾನ ಒದಗಿಸಲಾಗಿದೆ. ಎರಡ್ಮೂರು ತಿಂಗೊಳಗೆ ಗುಣಮಟ್ಟದ ರಸ್ತೆ ನಿರ್ಮಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಶಾಸಕ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೋಣೆಗಳು ಶಿಥಿಲಾವಸ್ಥೆಗೆ ತಲುಪಿರುವ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಸಂಬಂಧಿತರಿಗೆ ಸೂಚಿಸಿ ಬರುವ ದಿನಗಳಲ್ಲಿ ಶಾಲೆಗೆ ಹೊಸದಾಗಿ ಹೆಚ್ಚುವರಿ ಕೋಣೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಮುಖಂಡರಾದ ನೇತಾಜಿ ಪಾಟೀಲ, ರಾಚಯ್ಯ ಸ್ವಾಮಿ,ಶಶಿಧರ ಕೋಸಂಬೆ, ಪಿಕೆಪಿಎಸ್ ಅಧ್ಯಕ್ಷ ರಾಜಕುಮಾರ ಬಿರಾದಾರ, ಟಿಂಕು ರಾಜಭವನ, ರಮೇಶ ಪ್ರಭಾ, ಧನರಾಜ ಪಾಟೀಲ ಹಾಗೂ ಪ್ರಮುಖರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು