ಬುಧವಾರ, ಮಾರ್ಚ್ 29, 2023
24 °C

ಸಾವಿತ್ರಿಬಾಯಿ ಫುಲೆಗೆ ಭಾರತ ರತ್ನ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಕೊಟ್ಟ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಗೌರವ ಪ್ರಶಸ್ತಿ ನೀಡಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ಆಗ್ರಹಿಸಿದ್ದಾರೆ.

9ನೇ ವರ್ಷದಲ್ಲಿ ಜ್ಯೋತಿಬಾ ಫುಲೆ ಅವರೊಂದಿಗೆ ಮದುವೆಯಾದ ಅನಕ್ಷರಸ್ಥ ಸಾವಿತ್ರಿಬಾಯಿ ಮನೆ ಕೆಲಸಕ್ಕೆ ಸೀಮಿತವಾಗದೆ ವಿಷಮ ಪರಿಸ್ಥಿತಿಯಲ್ಲಿ ಪತಿಯಿಂದ ಅಕ್ಷರ ಜ್ಞಾನ ಪಡೆದು ಶೂದ್ರರಿಗಾಗಿ ಶಾಲೆಗಳನ್ನು ತೆರೆದು ಅಕ್ಷರ ಬೀಜ ಬಿತ್ತಿದ ಮಹಾಮಾತೆಗೆ ಗೌರವ ಸಲ್ಲಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಮೂಢನಂಬಿಕೆಗೆ ಸೆಡ್ಡು ಹೊಡೆದು ಮರಾಠಿಯಲ್ಲಿ ಸಾಹಿತ್ಯ ರಚಿಸಿ ಬಡವರಿಗೆ ಶಿಕ್ಷಣ ನೀಡಿದರು. ಅವರ 191ನೇ ಜನ್ಮದಿನದ ಶುಭ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಭಾರತ ರತ್ನ ಪುರಸ್ಕಾರ ನೀಡಿ ಗೌರವ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಬೇಕು. ಸಾವಿತ್ರಿಬಾಯಿ ಫುಲೆ ಜಯಂತಿಯನ್ನು ಶಿಕ್ಷಕಿಯರ ದಿನಾಚರಣೆಯಾಗಿ ಆಚರಣೆ ಮಾಡಬೇಕು. ಅವರ ಹೆಸರಿನಲ್ಲಿ ಡಿಜಿಟಲ್ ಗ್ರಂಥಾಲಯ ಪ್ರಾರಂಭಿಸಿ ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು