ಶನಿವಾರ, ಮೇ 15, 2021
24 °C

ಜಿಎನ್‍ಡಿ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ: ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸಿವಿಲ್ ಎಂಜಿನಿಯರಿಂಗ್ ಅಂತಿಮ ವರ್ಷದ ಪರೀಕ್ಷೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಎಂ.ಡಿ. ಹುಜೈಫಾ ಖುರೇಶಿ ಅವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಜೀವನದಲ್ಲಿ ಯಶಸ್ಸು ಗಳಿಸಲು ಗುರಿಯತ್ತ ಗಮನ ಕೇಂದ್ರೀಕರಿಸಬೇಕು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ನುಡಿದರು.

ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಪ್ರಯತ್ನಿಸುವ ಮೊದಲು ಸೋಲು ಒಪ್ಪಿಕೊಳ್ಳಬಾರದು. ಸತತ ಪರಿಶ್ರಮದಿಂದ ಗುರಿ ತಲುಪಬಹುದು ಎಂದು ತಿಳಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಸಾಮರ್ಥ್ಯ ಇರುತ್ತದೆ. ಅದಕ್ಕೆ ಪೂರಕ ವಾತಾವರಣ ನಿರ್ಮಿಸಿಕೊಡುವುದು ಅಗತ್ಯವಾಗಿರುತ್ತದೆ ಎಂದು ಹೇಳಿದರು.

ಕಾಲೇಜು ನಿರ್ದೇಶಕ ಕರ್ನಲ್ ಬಿ.ಎಸ್. ಧಲಿವಾಲ್, ಪ್ರಾಚಾರ್ಯ ರವೀಂದ್ರ ಎಕಲಾರಕರ್, ಡಾ. ವಿ.ಬಿ. ಕೋರಿ, ಡಾ. ಜ್ಯೋತಿ ಐನಾಪುರೆ, ಅಮರಸಿಂಗ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.