ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಾಸ್ಮಿನ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Last Updated 30 ಏಪ್ರಿಲ್ 2022, 12:51 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಜಾಸ್ಮಿನ್ ಪದವಿ ಕಾಲೇಜಿನ ವಿದ್ಯಾರ್ಥಿ ಗುಲಾಂ ಆಝಂ ಗುಲಾಂ ಎ ಮುಕ್ರಂ ಗುಲಬರ್ಗಾ ವಿಶ್ವವಿದ್ಯಾಲಯದ 2019-20ನೇ ಸಾಲಿನ ಬಿ.ಎ. ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾರೆ.

ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ 39ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಜಂಟಿಯಾಗಿ ಗುಲಾಂ ಆಝಂ ಅವರಿಗೆ ಪದವಿಯೊಂದಿಗೆ ಅಜೀಜ್ ಸೇಠ್ ಚಿನ್ನದ ಪದಕ ಪ್ರದಾನ ಮಾಡಿದರು.

ಗುಲಾಂ ಆಝಂ ಚಿನ್ನದ ಪದಕದ ಸಾಧನೆಯೊಂದಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಜಾಸ್ಮಿನ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಅಜೀಜ್ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT