ಬೀದರ್: ‘ಆತ್ಮವಿಶ್ವಾಸ ಇದ್ದರೆ ಅಂದುಕೊಂಡ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ನೌಬಾದನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಬೀದರ್ ವಿದ್ಯಾರ್ಥಿಗಳು ಯಾರಿಗಿಂತಲೂ ಕಡಿಮೆ ಇಲ್ಲ. ಅನೇಕರು ವಿಜ್ಞಾನಿಗಳಾಗಿದ್ದಾರೆ. ದೇಶ, ವಿದೇಶದಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. 50 ವರ್ಷ ಪೂರೈಸಿರುವ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಿದೆ’ ಎಂದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ‘ಸರ್ಕಾರಿ ಕಾಲೇಜುಗಳಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಬಡ ಹಾಗೂ ಮಾಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.

ಪ್ರಾಚಾರ್ಯೆ ಜೈಶ್ರೀ ಪ್ರಭಾ ಮಾತನಾಡಿ, ‘1974 ರಲ್ಲಿ ಪ್ರಾರಂಭವಾದ ಕಾಲೇಜು ಯಶಸ್ವಿಯಾಗಿ 50 ವರ್ಷ ಪೂರೈಸಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿ ತನ್ನದೇ ಆದ ಕೊಡುಗೆ ನೀಡಿದೆ’ ಎಂದು ತಿಳಿಸಿದರು.

ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ. ರಾಜಕುಮಾರ, ಸಾಂಸ್ಕೃತಿಕ ಕಾರ್ಯದರ್ಶಿ ಎಲಿಷಾ ದೇವಿದಾಸ, ಮಹಾದೇವಿ ಹೆಬ್ಬಾಳೆ, ಜೈಭಾರತ ಮಂಗೇಶ್ಕರ್, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.