ಗುರುವಾರ , ಅಕ್ಟೋಬರ್ 6, 2022
22 °C
ಸತ್ಯನಿಕೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೂರ್ಯಕಾಂತ ಭಂಗೂರ ಅಭಿಮತ

ನೆಮ್ಮದಿಯ ಬದುಕಿಗೆ ಉತ್ತಮ ಶಿಕ್ಷಣ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಸ್ಪರ್ಧಾತ್ಮಕ ಯುಗದಲ್ಲಿ ಜಯಶಾಲಿಯಾಗಲು ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿ ಹೆತ್ತವರ ಕನಸು ನನಸು ಮಾಡಬೇಕು. ನೆಮ್ಮದಿ ಬದುಕಿಗಾಗಿ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ’ ಎಂದು ಸತ್ಯನಿಕೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೂರ್ಯಕಾಂತ ಭಂಗೂರ ಅಭಿಪ್ರಾಯಪಟ್ಟರು.

ಸತ್ಯನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿ.ಎ, ಬಿ.ಕಾಂ, ಬಿ.ಎಸ್‍ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೇ ಸದ್ಗುಣಗಳನ್ನು ಅಳವಡಿಸಿಕೊಂಡು ಆರೋಗ್ಯ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಶಿವಾನಂದ ಗುಂದಗಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ ಹಾಗೂ ಪ್ರಾಚಾರ್ಯ ಅಶೋಕ ರಾಜೋಳೆ ಮಾತನಾಡಿದರು.

ಸಂಸ್ಥೆ ಅಧ್ಯಕ್ಷ ಶರದ ಸಿರ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಪ್ರಾಚಾರ್ಯ ಜೈಕಾಂತ ಗಂಗೂಜಿ , ರಮೇಶ ಗುನ್ನಾಳೆ, ಬಿ.ಆರ್.ಕಾಗೆ, ಶಿವರಾಜ ಗಾದಗೆ ಅವರು ಈ ವೇಳೆ ಇದ್ದರು.

ಪ್ರಾಚಾರ್ಯ ರಾಜಕುಮಾರ ಎಚ್.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯಲಕ್ಷ್ಮೀ ಸ್ವಾಮಿ ಸ್ವಾಗತಿಸಿದರು.

ಮಲ್ಲಮ್ಮ ಟಪಗೆ, ರಾಠೋಡ ವರದಿ ವಾಚನ ಮಾಡಿದರು. ಮಹೇಶ ನಿರೂಪಿಸಿದರು. ಅನಿತಾ ಕಮಲಾಪುರೆ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು