ಭಾನುವಾರ, ಸೆಪ್ಟೆಂಬರ್ 19, 2021
24 °C

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ: ಅನಂತ ಬಿರಾದಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ನಿರಂತರ ಯೋಗಾಭ್ಯಾಸ ಹಾಗೂ ಪ್ರಾಕೃತಿಕ ಚಿಕಿತ್ಸೆಯ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಇಂಟರ್‌ನ್ಯಾಷನಲ್ ನ್ಯಾಚುರೋಪತಿ ಆರ್ಗನೈಜೇಶನ್ (ಐಎನ್‍ಒ) ರಾಷ್ಟ್ರೀಯ ಅಧ್ಯಕ್ಷ ಅನಂತ ಬಿರಾದಾರ ಹೇಳಿದರು.

ಇಂಟರ್‌ನ್ಯಾಷನಲ್ ನ್ಯಾಚುರೋಪತಿ ಆರ್ಗನೈಜೇಶನ್ ವತಿಯಿಂದ ನಗರದ ಬರೀದ್‍ಶಾಹಿ ಉದ್ಯಾನವನದಲ್ಲಿ ಆಯೋಜಿಸಿದ್ದ ‘ಯೋಗ ಹಾಗೂ ಪ್ರಾಕೃತಿಕ ಚಿಕಿತ್ಸೆಯ ಮಹತ್ವ’ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಧುನಿಕತೆಗೆ ಒಗ್ಗಿಕೊಂಡಿರುವ ಅನೇಕ ಜನ ಐಷಾರಾಮಿ ಜೀವನಕ್ಕಾಗಿ ಹಪಹಪಿಸುತ್ತಿದ್ದಾರೆ. ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸದೇ ಇರುವುದರಿಂದ ರಕ್ತದೊತ್ತಡ, ಮಧುಮೇಹದಂತಹ ನಾನಾ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ’ ಎಂದು ತಿಳಿಸಿದರು.

‘ಐಎನ್‍ಒ ಸಂಸ್ಥೆಯು ದೇಶದಾದ್ಯಂತ ಸೆಮಿನಾರ್, ವೆಬಿನಾರ್, ತರಬೇತಿ ಶಿಬಿರ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಸೇರಿದಂತೆ ನಾನಾ ಕಾರ್ಯಕ್ರಮಗಳ ಮುಖಾಂತರ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ’ ಎಂದರು.

ಐಎನ್‍ಒ ಜಿಲ್ಲಾ ಘಟಕದ ಅಧ್ಯಕ್ಷ ಧೋಂಡಿರಾಮ ಚಾಂದಿವಾಲೆ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮನ್ಮಥ ಸ್ವಾಮಿ, ಜಿಲ್ಲಾ ಸಂಯೋಜಕರಾದ ಗುರುನಾಥ ರಾಜಗೀರಾ, ಪ್ರಮುಖರಾದ ಶ್ರೀಕಾಂತ ಮೋದಿ, ಡಾ.ಷಣ್ಮುಖಪ್ಪ ಜಮಶೆಟ್ಟಿ, ಯೋಗೇಂದ್ರ ಯದಲಾಪೂರೆ, ಗಂಗಪ್ಪ ಸಾವಳೆ, ಡಾ.ನಂದಕುಮಾರ ತಾಂದಳೆ, ರೂಪಾರಾಣಿ ಪಾಟೀಲ, ಜ್ಯೋತಿ ಫುಲೇಕರ್, ರವೀಂದ್ರ ಚಿಲ್ಲರ್ಗಿ, ಎಂ.ಡಿ ಆರೀಫ್, ರವೀಂದ್ರ ಸೋರಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು