ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌಷ್ಟಿಕ ಆಹಾರದಿಂದ ಸದೃಢ ಆರೋಗ್ಯ: ಮಹಾಂತೇಶ ಭಜಂತ್ರಿ

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ
Last Updated 5 ಅಕ್ಟೋಬರ್ 2022, 13:36 IST
ಅಕ್ಷರ ಗಾತ್ರ

ಬೀದರ್: ‘ಬಡ ಮಹಿಳೆಯರ, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರ ಮಹತ್ವದ್ದಾಗಿದೆ. ಅದಕ್ಕಾಗಿಯೇ ಸರ್ಕಾರ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಜಾರಿಗೊಳಿಸಿದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಶಕ್ತಿ ಒಕ್ಕೂಟ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಗರದ ಮೈಲೂರ್ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನಾ ಯೋಜನೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಗೌರವ ಸಲ್ಲಿಸುವುದಕ್ಕಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲು ಸೀಮಂತ ಕಾರ್ಯಕ್ರಮ ಕೇವಲ ಶ್ರೀಮಂತರು ಮಾತ್ರ ಮಾಡುತ್ತಿದ್ದರು. ಈಗ ಬಡ ಕುಟುಂಬದ ಗರ್ಭಿಣಿಯರಿಗೂ ಗೌರವ ಸಲ್ಲಿಸಲಾಗುತ್ತಿದೆ ಎಂದರು.

ಕಚೇರಿ ಅಧೀಕ್ಷಕ ಸುಭಾಷ ರತ್ನಾ, ಪ್ರಥಮ ದರ್ಜೆ ಸಹಾಯಕ ಸಂಗಮೇಶ್ವರ ಕಾಜಿ, ವಲಯದ ಮೆಲ್ವಿಚಾರಕಿಯರು, ಪೋಷಣ್ ಅಭಿಯಾನ ಯೋಜನೆಯ ಸಂಯೋಜಕರು, ಮಾತೃ ವಂದನಾ ಯೋಜನೆಯ ಸಂಯೋಜಕರು, ಮಹಿಳಾ ಶಕ್ತಿ ಕೇಂದ್ರದ ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹಾಗೂ ಫಲಾನುಭವಿಗಳು ಇದ್ದರು. ಮೇಲ್ವಿಚಾರಕಿ ಬೇಬಿನಂದಾ ನಿರೂಪಿಸಿದರು, ಮೇಲ್ವಿಚಾರಕಿ ಗಜರಾಬಾಯಿ ಸ್ವಾಗತಿಸಿದರು, ಮೇಲ್ವಿಚಾರಕಿ ವಿಜಯಲಕ್ಷ್ಮಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT