ಬುಧವಾರ, ಆಗಸ್ಟ್ 10, 2022
23 °C

ಬಸವಕಲ್ಯಾಣ: ತಾಲ್ಲೂಕಿನಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಪಟ್ಟಣ ಹಾಗೂ ತಾಲ್ಲೂಕಿನ ವಿವಿಧೆಡೆ ಬುಧವಾರ ಉತ್ತಮ ಮಳೆ ಸುರಿಯಿತು. ಬಿಸಿಲಿನ ದಗೆ ಕಡಿಮೆಯಾಗಿ ತಂಪು ವಾತಾವರಣ ನಿರ್ಮಾಣವಾಯಿತು. ಪಟ್ಟಣದ ರಸ್ತೆಗಳಲ್ಲಿ ನೀರು ಹರಿಯಿತು. ಚರಂಡಿಗಳು ತುಂಬಿದ್ದರಿಂದ ಕೆಲಕಾಲ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಕೆಲ ದಿನಗಳ ಹಿಂದೆ ತಾಲ್ಲೂಕಿನ ಅಲ್ಲಲ್ಲಿ ಮಳೆ ಅಗಿತ್ತು. ತಾಲ್ಲೂಕಿನ ಕೆಲ ಭಾಗಗಳಲ್ಲಿ ಈಗಾಗಲೇ ಬಿತ್ತನೆ ಆರಂಭಿಸಲಾಗಿತ್ತು. ಭೂಮಿ ಹಸಿಯಾಗಿದ್ದು, ಗುರುವಾರದಿಂದ ಎಲ್ಲ ಕಡೆ ಬಿತ್ತನೆ ಆರಂಭವಾಗುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು